ಬೆಂಗಳೂರು:ಇಂದಿನಿಂದ ಬಸವರಾ ಬೊಮ್ಮಾಯಿ ರಾಜ್ಯಭಾರ ಶುರುವಾಗಲಿದೆ. ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಅಧಿಕಾರ ಸ್ವೀಕರಿಸಿದ ಬೊಮ್ಮಾಯಿಗೆ ಅಧಿಕಾರಾವಧಿ ಇರೋದು ಇನ್ನು ಒಂದೂಮುಕ್ಕಾಲು ವರ್ಷ ಮಾತ್ರ. ಈ ಸಮಯದಲ್ಲೇ ರಾಜ್ಯದ ಜನತೆ ಮೆಚ್ಚುವಂತಹ ಉತ್ತಮ ಆಡಳಿತ ನೀಡುವ ಜತೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರುವ ನಿಟ್ಟಿನಲ್ಲೂ ಕಾರ್ಯನಿರ್ವಹಿಸಬೇಕಿದೆ.
ಸಚಿವಸ್ಥಾನ ಆಕಾಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದ್ದು, ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗಬೇಕಿದೆ. ಸದ್ಯ ಉತ್ತರ ಕರ್ನಾಟಕ ಪ್ರವಾಹಕ್ಕೆ ಸಿಲುಕಿದ್ದು, ರಾಜ್ಯದ ಜನತೆ ಕರೊನಾ ಸಂಕಷ್ಟದಿಂದ ಹೊರಬಂದಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯನ್ನ ನಿಭಾಯಿಸಿ ರಾಜ್ಯಭಾರ ಮಾಡಬೇಕಿದೆ. ಕರೊನಾ ಹಿನ್ನೆಲೆ ಅಭಿವೃದ್ಧಿ ಕಾರ್ಯಕ್ಕೆ ಭಾರೀ ಹಿನ್ನೆಡೆಯಾಗಿದ್ದು, ನಿರುದ್ಯೋಗ ಸಮಸ್ಯೆಯೂ ದಟ್ಟವಾಗಿ ಆವರಿಸಿದೆ. ಅಭಿವೃದ್ಧಿಯತ್ತಲೂ ಗಮನಹರಿಸಬೇಕಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
