ಬೆಂಗಳೂರು:ರಾಜ್ಯಕ್ಕೆ ಸಂಬಂಧಿಸಿದ ಅಂತಾರಾಜ್ಯ ಜಲ ವಿವಾದ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವಿಗೆ ಕೇಂದ್ರ ಸಕಾರಾತ್ಮಕವಾಗಿ ಸ್ಪಂದಿಸಿದೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ದೆಹಲಿ ಭೇಟಿ ಫಲಪ್ರದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಿಶ್ಲೇಷಿಸಿದರು.
ದೆಹಲಿಯಿಂದ ಗುರುವಾರ ಹಿಂತಿರುಗಿದ ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ, ಜಲಶಕ್ತಿ, ಇಂಧನ, ಪರಿಸರ, ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದರು.
ಏಪ್ರಿಲ್ 16 ಮತ್ತು 17 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡಿಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ನನಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯನ್ನು ನೀಡಿದ್ದಾರೆ. ಜತೆಗೆ ಈ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸಿಎಂ ವಿವರಿಸಿದರು.
ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲವಾಗಿ ಚರ್ಚೆಯಾಗಿದೆ. ವರಿಷ್ಠರು ಎಲ್ಲ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕಾರ್ಯಕಾರಿಣಿ ಸಭೆಗೆ ಬಂದ ಸಂದರ್ಭದಲ್ಲಿ ಮಿಕ್ಕ ವಿಚಾರಗಳನ್ನು ಮಾತನಾಡುವುದಾಗಿ ತಿಳಿಸಿದ್ದಾರೆ. ಇಲ್ಲಿಯ ವರಿಷ್ಠರು, ನಾಯಕರು, ಸಂಘಟನಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡೋಣ ಎಂದು ತಿಳಿಸಿದ್ದಾರೆ. ಬೆಂಗಳೂರಿಗೆ ಹಿಂತಿರುಗಿದ ನಂತರ ಬಜೆಟ್​ನಲ್ಲಿ ಘೋಷಿಸಿರುವ ಯೋಜನೆಗಳ ಆದೇಶಗಳನ್ನು ನೀಡಿ ಅವುಗಳ ಅನುಷ್ಠಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
ಹಿಜಾಬ್, ಹಲಾಲ್, ಜಟ್ಕಾ ಕಟ್ ಆಯ್ತು… ಇದೀಗ ಮುಸ್ಲಿಮರು ಕೆತ್ತಿದ ವಿಗ್ರಹ ಪ್ರತಿಷ್ಠಾಪಿಸದಂತೆ ಅಭಿಯಾನ

ಥೂ, ಇದೆಂಥಾ ಅಸಹ್ಯ? ಚೆನ್ನೈನಲ್ಲಿ ಮೂವರು ಬಾಲಕರ ಜತೆ ಗುಂಪು ಲೈಂಗಿಕ ಕ್ರಿಯೆ ನಡೆಸಿದ ಶಿಕ್ಷಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 5 =
Remember me
