ಬೆಂಗಳೂರು:ಯಡಿಯೂರಪ್ಪ ಅವರನ್ನ ದೂರ ಇಟ್ಟು ಸರ್ಕಾರ ರಚನೆ ಮಾಡುವುದು ಕಷ್ಟ. ಈ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನಾನು ಸಪೋರ್ಟ್ ಮಾಡ್ತೀನಿ. ಅವಧಿಗೂ ಮೊದಲೇ ಚುನಾವಣೆಗೆ ಹೋಗುವ ಆಸೆ ನಮಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಎಚ್​.ಡಿ. ದೇವೇಗೌಡ ಭರವಸೆ ನೀಡಿದ್ದಾರೆ.
ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭಾನುವಾರ ಸಿಎಂ ಬೊಮ್ಮಾಯಿ ಅವರು ಭೇಟಿ ನೀಡಿ ಅನೌಪಚಾರಿಕವಾಗಿ ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ಅವರ ತಂದೆ ಮತ್ತು ಬಸವರಾಜ ಇಬ್ಬರೂ ನಮ್ಮ ಜತೆ ಕೆಲಸ ಮಾಡಿದ್ದಾರೆ. ನನ್ನನ್ನು ಭೇಟಿ ಮಾಡಬೇಕು ಅಂದ್ರು, ಬಾರಪ್ಪ ಎಂದು ಕರೆದೆ, ಬಂದರು. ಒಳ್ಳೆಯ ಕೆಲಸ ಮಾಡು, ಜನತೆಗೆ ಒಳ್ಳೆಯದಾಗಬೇಕು. ನನಗೆ ಕಾಲಿನ ತೊಂದರೆಯಿಂದ ಓಡಾಡಲು ಆಗಲ್ಲ. ನೀರಾವರಿ ವಿಚಾರದಲ್ಲಿ ಸಲಹೆ ಕೇಳಿದ್ರೆ ಕೊಡ್ತೀನಿ. ಎರಡು ವರ್ಷ ಅಧಿಕಾರಾವಧಿ ಪೂರ್ಣಗೊಳಿಸಲು ನಮ್ಮಿಂದ ನಿಮಗೆ ಯಾವುದೇ ಸಮಸ್ಯೆ ಆಗಲ್ಲ. ನಿನಗೆ ಒಳ್ಳೆಯದಾಗ್ಲಿ ಎಂದು ಹೇಳಿ ಕಳಿಸಿದೆ ಎಂದು ಹೇಳಿದರು.
ಯಡಿಯೂರಪ್ಪ ಅವರನ್ನು ತೆಗೆಯುವಂತೆ ನಾವು ಹೇಳಿಲ್ಲ. ಕೇಂದ್ರದವರು 75 ವರ್ಷ ಆದ ಮೇಲೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಯಡಿಯೂರಪ್ಪಗೆ ವಿಶೇಷ ಸಂದರ್ಭದಲ್ಲಿ ಎರಡು ವರ್ಷ ಅವಕಾಶ ಕೊಟ್ಟಿದ್ದಾರೆ. ಹೀಗಾಗಿ ಕೇಂದ್ರದವರು ರಾಜೀನಾಮೆ ಕೊಡಲು ಹೇಳಿ ಬೊಮ್ಮಯಿ ಅವರನ್ನು ಸಿಎಂ ಮಾಡಿದ್ದಾರೆ. ಎರಡು ವರ್ಷ ಪೂರೈಸಲು ನಮ್ಮಿಂದ ಯಾವುದೇ ತೊಂದರೆ ಇಲ್ಲ ಎಂದು ದೇವೇಗೌಡ ಹೇಳಿದರು. ಇದೇ ವೇಳೆ ರಾಜಕಾರಣಕ್ಕೆ ವಯಸ್ಸು ಮುಖ್ಯ ಅಲ್ಲ, ಕೆಲಸ ಮಾಡಲು ಆಸಕ್ತಿ ಮುಖ್ಯ ಎಂದರು.
2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ನಂದಿಬೆಟ್ಟದ ತಪ್ಪಲಲ್ಲಿ ಇದೆಂಥಾ ವರ್ತನೆ? ಹೇಳೋರಿಲ್ಲ ಕೇಳೋರಿಲ್ಲ… ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eleven =
Remember me
