ಬೆಂಗಳೂರು:ಖಾತೆ ಹಂಚಿಕೆ ಕುರಿತು ಕೆಲವರಿಗೆ ಅಸಮಾಧಾನ ಆಗಿರುವುದು ನಿಜ. ಎಲ್ಲರನ್ನೂ ಕರೆದು ಚರ್ಚಿಸಿ ಸರಿಪಡಿಸುವೆ. ಸಚಿವ ಆನಂದ್ ಸಿಂಗ್ ಮತ್ತು ಶಾಸಕ ಪ್ರೀತಂ ಗೌಡ ವ್ಯಕ್ತಪಡಿಸಿದ ಅಭಿಪ್ರಾಯಗಳು ನನ್ನ ಗಮನಕ್ಕೆ ಬಂದಿದೆ. ಅವರಿಬ್ಬರು ಸೇರಿದಂತೆ ಅಸಮಾಧಾನಿತ ಎಲ್ಲರೊಂದಿಗೂ ಮಾತನಾಡುವೆ. ಶೀಘ್ರವೇ ಎಲ್ಲ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನೂತನ ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೇ ‘ನಾನು ಕೇಳಿದ್ದೇ ಒಂದು, ಕೊಟ್ಟಿರೋದೇ ಮತ್ತೊಂದು. ನನಗೆ ಕೊಟ್ಟಿರುವ ಖಾತೆಯನ್ನು ಬದಲಾವಣೆ ಮಾಡಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೇಳುವೆ. ಕೊಡದಿದ್ದರೆ ನನ್ನ ದಾರಿಯನ್ನ ನಾನೇ ನೋಡಿಕೊಳ್ಳುವೆ’ ಎಂದು ಆನಂದ್​ ಸಿಂಗ್​ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದರು. ಅತ್ತ ಶಾಸಕ ಪ್ರೀತಂ ಗೌಡ, ‘ಸಚಿವ ಸಂಪುಟ ವಿಸ್ತರಣೆಗೂ ಮುನ್ನ ಸಿಎಂ ಬೊಮ್ಮಾಯಿ‌ ಅವರು ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗುವ ಔಚಿತ್ಯವೇನಿತ್ತು? ಇದರಿಂದಾಗಿಯೇ ಹಳೇ ಮೈಸೂರು ಭಾಗಕ್ಕೆ ಮತ್ತು ನನಗೆ ಸಚಿವ ಸ್ಥಾನ ತಪ್ಪಿದೆ’ ಕಿಡಿಕಾರಿದ್ದರು.
ಇವರಿಬ್ಬರ ಅಸಮಾಧಾನ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು ಆನಂದ ಸಿಂಗ್ ಮತ್ತು ಪ್ರೀತಂ ಗೌಡ ಸೇರಿದಂತೆ ಎಲ್ಲರೂ ನನ್ನ ಸ್ನೇಹಿತರೇ. ಆಡಳಿತದಲ್ಲಿ ಬದಲಾವಣೆ ತರಬೇಕು ಎನ್ನುವ ಉದ್ದೇಶದಿಂದ ಖಾತೆಗಳು ಹಂಚಿಕೆಯಾಗಿವೆ. ಎಲ್ಲರೂ ಉತ್ತಮವಾಗಿ ನಿಭಾಯಿಸಲಿದ್ದಾರೆ ಎಂದರು.
ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಮೈಸೂರು ವಿವಿ ಪ್ರಾಧ್ಯಾಪಕ ಕಾಮಪುರಾಣ ಕೇಸ್​ಗೆ ಸ್ಫೋಟಕ ತಿರುವು! ಮರುದಿನವೇ ಉಲ್ಟಾ ಹೊಡೆದ ಸಂತ್ರಸ್ತೆ

ನನ್ನ ದಾರಿ ನಾನೇ ನೋಡಿಕೊಳ್ಳುವೆ… ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ ಆನಂದ್​ ಸಿಂಗ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + thirteen =
Remember me
