ಬೆಂಗಳೂರು:ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಕೊನೆಗೂ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಮೌನ ಮುರಿದಿದ್ದಾರೆ.
ಗುರುವಾರ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ ಸಿಎಂ, ನಾನು ಹೈಕಮಾಂಡ್ ಹೇಳಿದಂತೆ ಕೇಳುವೆ. ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಅವರು ನನ್ನ ಮೇಲೆ ವಿಶೇಷ ಪ್ರೀತಿ ಮತ್ತು ವಿಶ್ವಾಸ ಇಟ್ಟುಕೊಂಡಿದ್ದಾರೆ. 75 ವರ್ಷ ದಾಟಿದ ಯಾರಿಗೂ ಜವಾಬ್ದಾರಿ ನೀಡಿಲ್ಲ. ಆದರೆ, ಬಿಎಸ್​ವೈ ಕಾರ್ಯವೈಖರಿಯನ್ನು ಮೆಚ್ಚಿದ್ದಾರೆ. ಹೀಗಾಗಿ ಅವರು ನನಗೆ ಅವಕಾಶ ಕೊಟ್ಟಿದ್ದಾರೆ ಎಂದರು.
ಮುಂದಿನ ವರ್ಷಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು. ಜು.26ರಂದು ನಾನು ಅಧಿಕಾರಕ್ಕೆ ಬಂದು 2 ವರ್ಷ ಆಗಲಿದೆ. ಪಕ್ಷದ ವರಿಷ್ಠರ ಸೂಚನೆಯಂತೆ ನಡೆದುಕೊಳ್ಳುತ್ತೇನೆ. ಪಕ್ಷದ ಎಲ್ಲರೂ ಇದೇ ರೀತಿ ಸಹಕಾರ ಕೊಡಬೇಕು. ಪಕ್ಷದ ಚಟುವಟಿಕೆಗಳ ಕಡೆಯತ್ತ ಗಮನಹರಿಸುತ್ತೇನೆ. ಮುಂದಿನ ಬಾರಿಯೂ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಗುರಿ ಇದೆ. ನನ್ನ ಪರವಾಗಿ ಯಾರೂ ಹೇಳಿಕೆ ಕೊಡಬಾರದು, ಯಾರೂ ವರಷ್ಠರ ವಿರುದ್ಧ ಪ್ರತಿಭಟನೆ ಮಾಡಬಾರದು. ಮಠಾಧೀಶರು ಬಂದು ನನಗೆ ಬೆಂಬಲ ಸೂಚಿಸಿದ್ದಾರೆ. ಇಷ್ಟೊಂದು ಬೆಂಬಲ ಯಾರಿಗೂ ಸಿಕ್ಕಿರಲಿಲ್ಲ. ಇದು ನನ್ನ ಭಾಗ್ಯ ಎಂದು ಯಡಿಯೂರಪ್ಪ ಹೇಳಿದರು.
ಜು.25ರಂದು ವರಿಷ್ಠರಿಂದ ಸೂಚನೆ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವೆ. ಜು.26ರಂದು ನಾನು ಸಿಎಂ ಆಗಿ ಅಧಿಕಾರವಹಿಸಿಕೊಂಡು 2 ವರ್ಷ. ಸರ್ಕಾರದ ಸಾಧನಾ ಕಾರ್ಯಕ್ರಮ ಬಳಿಕ ವರಿಷ್ಠರ ಸೂಚನೆಯಂತೆ ನಡೆಯುತ್ತೇನೆ ಎಂದು ಪುನರುಚ್ಛರಿಸಿದರು.
ನಾವ್ಯಾರೂ ರಾಜಕಾರಣಿಗಳ ಜತೆ ಓಡಾಡ್ತಿಲ್ಲ: ಸಿಎಂ ಭೇಟಿ ಬಳಿಕ ಸಿದ್ಧಗಂಗಾ ಶ್ರೀಗಳ ಹೇಳಿಕೆ

ಇದೆಂಥಾ ದುರ್ಬುದ್ಧಿ… ಆಂಬುಲೆನ್ಸ್​ಗೆ ದಾರಿ ಬಿಡದೆ ತೊಂದರೆ ಕೊಟ್ಟ

ಕೃಷ್ಣೆ ತೀರದಲ್ಲಿ ಧಾರಾಕಾರ ಮಳೆ, 8 ಸೇತುವೆ ಜಲಾವೃತ: ನದಿ ತೀರದಲ್ಲಿ ಹೈಅಲರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 7 =
Remember me
