ಕಲಬುರಗಿ:ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದ ರಸ್ತೆಯಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಉದ್ಘಾಟಿಸಿದರು.
ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಸಮಿತಿ ಕಲಬುರಗಿ ವತಿಯಿಂದ ಪೊಲೀಸ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಎಂ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್​ ಆಯುಕ್ತಾಲಯ ಕಟ್ಟಡ ಉದ್ಘಾಟಿಸಿದರು.
ನೂತನ ಕಟ್ಟಡವನ್ನು ಸಚಿವ-ಶಾಸಕರೊಂದಿಗೆ ವೀಕ್ಷಿಸಿದರು. ಮುಖ್ಯಮಂತ್ರಿಗಳು ವಿಸಿಟರ್ ವಹಿಯಲ್ಲಿ ಹಸ್ತಾಕ್ಷರ ಮಾಡಿ, ನೂತನ ಕಚೇರಿಗೆ ಕೂಡಲೇ ಕಚೇರಿ ವರ್ಗಾಯಿಸಿ ಕೆಲಸ ಅರಂಭಿಸುವಂತೆ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ ಅವರಿಗೆ ಸೂಚಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ್​ ಅವರು ನೆನಪಿನ ಕಾಣಿಕೆ ನೀಡಿ ಸತ್ಕರಿಸಿದರು. ಇದಕ್ಕೂ ಮೊದಲು ಪೊಲೀಸ್ ತುಕಡಿಯಿಂದ ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಸಚಿವರಾದ ಭಗವಂತ ಖೂಬಾ, ಡಾ.ಮುರುಗೇಶ್​ ನಿರಾಣಿ, ಮುನಿರತ್ನ ಇದ್ದರು.
ಹಾವಿನ ಪಕ್ಕದಲ್ಲೇ ಮಲಗಿ ಸಾವು ಗೆದ್ದ ಕಂದ! ಪಾಳುಬಾವಿಗೆ ಹಸುಗೂಸನ್ನು ಎಸೆದಿದ್ದ ಹೆತ್ತಮ್ಮ… ಮಂಡ್ಯದಲ್ಲಿ ಮನಕಲಕುವ ಘಟನೆ

ತುಮಕೂರಿನ ಮಹಿಳಾ ಪೇದೆ ಹಾಸನದಲ್ಲಿ ಶವವಾಗಿ ಪತ್ತೆ! ಅಕ್ಕನನ್ನೇ ಕೊಂದು ಲಾಡ್ಜ್​ನಲ್ಲಿ ದುರಂತ ಅಂತ್ಯ ಕಂಡ ತಮ್ಮ

ಕಲ್ಯಾಣ ಕರ್ನಾಟಕ ಉತ್ಸವದ ಅಮೃತೋತ್ಸವಕ್ಕೆ ಸಿಎಂ ಚಾಲನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 9 =
Remember me
