ಮಡಿಕೇರಿ:ದೈವಾರಾಧನೆ ಹಿಂದು ಸಂಪ್ರದಾಯವಲ್ಲ ಎಂಬ ಹೇಳಿಕೆ ನೀಡುವ ಮೂಲಕ ಚಿತ್ರನಟ ಚೇತನ್​ ಲಕ್ಷಾಂತರ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಿ, ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಯುವಸೇನೆ ಮಡಿಕೇರಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದೆ.
ಯುವಸೇನೆಯ ಜಿಲ್ಲಾ ಉಪಾಧ್ಯಕ್ಷ ನಡುಮುಟ್ಲು ಪ್ರವಿಣ್​ ಅವರು ಡಿವೈಎಸ್​ಪಿ ಗಜೇಂದ್ರಪ್ರಸಾದ್​ ಅವರಿಗೆ ಶುಕ್ರವಾರ ದೂರು ಸಲ್ಲಿಸಿ, ಚೇತನ್​ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಯುವಸೇನೆ ಮುಖಂಡ ಕುಲ್ದೀಪ್​, ಪೂಣಚ್ಚ​ ಇದ್ದರು.
ರಿಷಬ್​ ಶೆಟ್ಟಿ ನಿರ್ದೇಶನದ ದೈವಾರಾಧನೆ ಕಥೆಯಾಧಾರಿತ “ಕಾಂತಾರ” ಚಿತ್ರ ಯುವ ಜನಾಂಗಕ್ಕೆ ಮಾರ್ಗದರ್ಶನ ಮಾಡುವಲ್ಲಿ ಯಶಸ್ವಿಯಾಗಿದೆ ಮತ್ತು ದೈವಶಕ್ತಿಯನ್ನು ಪ್ರತಿಬಿಂಬಿಸಿದೆ. ಚಿತ್ರ ಲಕ್ಷಾಂತರ ಭಕ್ತರ ಮನಸೂರೆಗೊಳ್ಳುತ್ತಿರುವ ಹೊತ್ತಿನಲ್ಲಿ ನಟ ಚೇತನ್​ ದೈವಾರಾಧನೆ ಕುರಿತು ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಮದುವೆ ಆಮಿಷವೊಡ್ಡಿ ಯುವತಿಗೆ ಲೈಂಗಿಕ ದೌರ್ಜನ್ಯ: ಬೆಂಗಳೂರಲ್ಲಿ ಸಬ್​ಇನ್​ಸ್ಪೆಕ್ಟರ್​ ಬಂಧನ

ಮದುವೆ ಆಮಿಷವೊಡ್ಡಿ ಯುವತಿಗೆ ಲೈಂಗಿಕ ದೌರ್ಜನ್ಯ: ಬೆಂಗಳೂರಲ್ಲಿ ಸಬ್​ಇನ್​ಸ್ಪೆಕ್ಟರ್​ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + eighteen =
Remember me
