ಮೈಸೂರು:ಭಾರತ್​ ಜೋಡೋ ಪಾದಯಾತ್ರೆ ಹಿನ್ನೆಲೆ ಮೈಸೂರು ಜಿಲ್ಲೆಗೆ ಆಗಮಿಸಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಭಾನುವಾರ ಬೆಳಗ್ಗೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದರು. ಬಳಿಕ ಬದನವಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ಬಣ್ಣ ಬಳಿದರು.
ಭಾರತ್​ ಜೋಡೋ ಯಾತ್ರೆಯು ಶುಕ್ರವಾರ ಗುಂಡ್ಲುಪೇಟೆಗೆ ಆಗಮಿಸುವ ಮೂಲಕ ಕರ್ನಾಟಕ ಪ್ರವೇಶಿಸಿದೆ. ಅಭೂತಪೂರ್ವ ಬೆಂಬಲದೊಂದಿಗೆ ಯಾತ್ರೆಯು ಮೈಸೂರು ಜಿಲ್ಲೆ ಪ್ರವೇಶಿಸಿದ್ದು, ಗಾಂಧಿ ಜಯಂತಿ ಹಿನ್ನೆಲೆ ಬದನವಾಳು ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದ ರಾಹುಲ್​, ಅಲ್ಲಿಯೇ ಗಾಂಧಿ ಜಯಂತಿ ಆಚರಿಸಿದರು. ಭಜನೆ, 200 ಗಿಡ ನಡೆಯುವ ಕಾರ್ಯಕ್ರಮ ನಡೆಯಿತು ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರದ ನೇಯ್ಗೆಕಾರರೊಂದಿಗೆ ರಾಹುಲ್​ ಸಂವಾದ ನಡೆಸಿದರು. ಈ ಕೇಂದ್ರಕ್ಕೆ 1927ರಲ್ಲಿ ಗಾಂಧೀಜಿ ಚಾಲನೆ ನೀಡಿದ್ದರು.

ನಂತರ‌ ಬದನವಾಳು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮವೂ ನಡೆಯಿತು. ಗ್ರಾಮದ ಸರ್ಕಾರಿ ಶಾಲೆಯ ಕಾಂಪೌಂಡ್​ಗೆ ರಾಹುಲ್​ ನೇತೃತ್ವದ ಟೀಂ ಬಣ್ಣ ಬಳಿಯುತು. ಸ್ವತಃ ರಾಹುಲ್​ ಅವರೂ ಬಣ್ಣ ಬಳಿದರು. ರಾಹುಲ್‌ಗೆ ಸಿದ್ದರಾಮಯ್ಯ ಮತ್ತು ಡಿಕೆಶಿ ಸಾಥ್ ನೀಡಿದರು.

ಮಧ್ಯಾಹ್ಮ 3.30 ಇತಿಹಾಸ ಪ್ರಸಿದ್ಧ ನಂಜನಗೂಡಿನ‌ ನಂಜುಡೇಶ್ವರ ಸನ್ನಧಿಗೆ ರಾಹುಲ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವರು. ಸಂಜೆ ತಾಂಡವಪುರದಿಂದ ಮೈಸೂರಿನತ್ತ ಪಾದಯಾತ್ರೆ ನಡೆಯಲಿದೆ. ರಾತ್ರಿ ಎಕ್ಸಿಬಿಷನ್‌ ಗ್ರೌಂಡ್ ಪಕ್ಕದ ಮೈದಾನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಭಾರತ್​ ಜೋಡೋ ಯಾತ್ರೆಗೆ ನಾಳೆ ಸೋನಿಯಾ ಆಗಮನ: ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್​ ಅಬ್ಬರ

ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

ಹಸು ಮೇಯಿಸಿಕೊಂಡು ಮನೆಗೆ ತೆರಳುತ್ತಿದ್ದ ಚನ್ನಪಟ್ಟಣದ ರೈತ ದಂಪತಿ ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 6 =
Remember me
