ಬೆಂಗಳೂರು:ಆಸ್ಪತ್ರೆಗಳಲ್ಲಿ ಬೆಡ್​, ಆಕ್ಸಿಜನ್​ ಸಿಗದೆ ನಿತ್ಯ ನೂರಾರು ಕರೊನಾ ಸೋಂಕಿತರು ಪ್ರಾಣಬಿಡುತ್ತಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲೂ ಬೆಡ್​ ಬ್ಲಾಕಿಂಗ್​ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ಈ ಸಂಬಂಧ ನಿನ್ನೆ(ಮಂಗಳವಾರ) ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನೇತ್ರಾವತಿ(42) ಮತ್ತು ರೋಹಿತ್(32) ಬಂಧಿತರು. ಬೆಡ್​ ಬ್ಲಾಕಿಂಗ್​ ದಂಧೆಯಲ್ಲಿ ಸಿಕ್ಕಿಬಿದ್ದ ಆರೋಪಿ ನೇತ್ರಾವತಿ ಕಾಂಗ್ರೆಸ್ ನಾಯಕರ ಜತೆ ಈ ಹಿಂದೆ ತೆಗೆಸಿಕೊಂಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್, ಜಯನಗರ ಶಾಸಕಿ ಸೌಮ್ಯಾರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ಜತೆಗೆ ಆರೋಪಿ ನೇತ್ರಾವತಿ ಇರುವ ಫೋಟೋಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.

ಬಂಧಿತ ನೇತ್ರಾವತಿ ಮತ್ತು ರೋಹಿತ್ ನೆರೆಮನೆ ನಿವಾಸಿಗಳು. ಬಿಬಿಎಂಪಿ ವಾರ್ ರೂಮಿನಲ್ಲಿ ನೇತ್ರಾವತಿ ಹಲವರೊಂದಿಗೆ ಸಂಪರ್ಕದಲ್ಲಿರುವುದು ಖಚಿತವಾಗಿದೆ. ಈ ದಂಧೆಯ ಹಿಂದೆ ದೊಡ್ಡ ಜಾಲವೇ ಇರುವುದು ಸಿಸಿಬಿ ಗಮನಕ್ಕೆ ಬಂದಿದೆ. ತಾನು ಸಾಮಾಜಿಕ ಕಾರ್ಯಕರ್ತೆ ಎಂದು ಪೊಲೀಸರ ಬಳಿ ನೇತ್ರಾವತಿ ಹೇಳಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಬೆಡ್​ ಬ್ಲಾಕ್​ ದಂಧೆಯ ಬ್ರಹ್ಮಾಂಡ ಬಿಚ್ಚಿಟ್ಟ ತೇಜಸ್ವಿ ಸೂರ್ಯ: ಭ್ರಷ್ಟಾಚಾರ ಅಲ್ಲ ಇದು ಮರ್ಡರ್… ಇವರೆಲ್ಲ ಹುಳ ಬಿದ್ದು ಸಾಯ್ತಾರೆ

ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ಅಪಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eight =
Remember me
