ಮೈಸೂರು:ಶಿವಮೊಗ್ಗದಲ್ಲಿ ಶಂಕಿತ ಉಗ್ರರಿಬ್ಬರನ್ನು ಪೊಲೀಸರು ಬಂಧಿಸಿದ್ದು, ಉಗ್ರ ಸಂಟನೆಗಳೊಂದಿಗೆ ನಿರಂತರ ಸಂಪರ್ಕ ಹೊಂದಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಇದು ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಆದರೆ, ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಯುವ ಕಾಂಗ್ರೆಸ್​ ಅಧ್ಯಕ್ಷ ಮೊಹಮ್ಮದ್​ ನಲಪಾಡ್​, ಶಿವಮೊಗ್ಗದ ಯುವಕರು ಐಸಿಸ್​ ಸಂಘಟನೆಯೊಂದಿಗೆ ನಂಟು ಹೊಂದಲು ನಿರುದ್ಯೋಗ ಸಮಸ್ಯೆ ಕಾರಣ ಎಂದು ವ್ಯಾಖ್ಯಾನಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ನಲಪಾಡ್​, ನಿರುದ್ಯೋಗದಿಂದ ರಾಜ್ಯದಲ್ಲಿ ಯುವಕರು ತಪ್ಪು ದಾರಿಯಲ್ಲಿ ಹೋಗುತ್ತಿದ್ದಾರೆ. ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸಲು ವಿಫಲವಾಗಿದೆ. ಇದಕ್ಕೆ ಈ ಸರ್ಕಾರವೇ ಹೊಣೆ. ಕೆಲಸ ಸಿಕ್ಕಿದ್ದರೆ ಯುವಕರು ತಪ್ಪು ದಾರಿ ತುಳಿಯುವ ಯೋಚನೆ ಮಾಡುತ್ತಿರಲಿಲ್ಲ. ಐಸಿಸ್​ ಸಂಪರ್ಕದಲ್ಲಿ ಇರುವವರನ್ನು ಭಾರತದಲ್ಲಿ ಇಟ್ಟುಕೊಳ್ಳಬೇಡಿ, ಅವರಿಗೆ ಗಲ್ಲು ಶಿಕ್ಷೆ ಕೊಡಿ ಎಂದು ಆಗ್ರಹಿಸಿದರು.
2023ರವರೆಗೆ ಯುವಕರು ತಾಳ್ಮೆಯಿಂದ ಇರಬೇಕು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್​ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಆ ಸಂದರ್ಭ ರಾಜ್ಯದಲ್ಲಿ ಸುವರ್ಣ ಕಾಲ ನಿರ್ಮಾಣ ಆಗಲಿದೆ. ಹಾಗಾಗಿ ಯುವಕರು ತಪ್ಪು ದಾರಿ ತುಳಿಯುವ ಕಾರ್ಯ ಮಾಡಬಾರದು ಎಂದರು.
ನಾಳೆ ಬಯಲಾಗಲಿದೆ ಸಚಿವರೊಬ್ಬರ ಅಕ್ರಮ: ಏಕವಚನದಲ್ಲಿ ಮಾತಾಡಿ ಎಚ್​ಡಿಕೆಯನ್ನು ಕೆಣಕಿದ ಸಚಿವರಿಗೆ ಕಾದಿದ್ಯಾ ಗಂಡಾಂತರ?

ಆನೇಕಲ್​ನ ಮನೆಯೊಂದರಲ್ಲಿ ಮಂಡ್ಯ ಮೂಲದ ಪ್ರೇಮಿಗಳಿಬ್ಬರ ಶವ ಪತ್ತೆ! ಆ ದಿನ ನಡೆದಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − six =
Remember me
