ಕಲಬುರಗಿ:ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬೇಕು ಅಂದ್ರೆ ಯುವತಿಯರು ಮಂಚ‌ ಹತ್ತಬೇಕು. ಯುವಕರಿಗೆ ನೌಕರಿ ಬೇಕು ಅಂದ್ರೆ ಲಂಚ ಕೊಡಬೇಕು ಎಂಬಂತಹ ಕೆಟ್ಟ ಪರಿಸ್ಥಿತಿಯನ್ನು ಸರ್ಕಾರ ನಿರ್ಮಿಸಿದೆ. ರಾಜ್ಯದಲ್ಲಿ ಲಂಚ‌-ಮಂಚದ ಸರ್ಕಾರ ಕೆಲಸ ನಿರ್ವಹಿಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
75ನೇ ಸ್ವಾಂತತ್ರ್ಯೋತ್ಸವ ಹಿನ್ನೆಲೆ ಕುಣಿಗಲ್​ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಡಾ.ರಂಗನಾಥ್​ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಮೂರು ದಿನಗಳ ಹಿಂದೆ ಪಾಲ್ಗೊಂಡಿದ್ದ ಪ್ರಿಯಾಂಕ್​ ಖರ್ಗೆ, ಸರ್ಕಾರಿ ಉದ್ಯೋಗ ಬೇಕು ಅಂದ್ರೆ ಮಂಚ ಹತ್ತಬೇಕು, ಇಲ್ಲವೇ ಲಂಚ‌ ಕೊಡಬೇಕು. ಅಂತಹ ಕೆಟ್ಟ ಪರಿಸ್ಥಿತಿಯನ್ನ ಬಿಜೆಪಿ ಸರ್ಕಾರ ಸೃಷ್ಟಿಸಿದೆ ಎಂದು ಆಕ್ರೋಶ ಹೊರಹಾಕಿದ್ದರು. ಇದೇ ಮಾತನ್ನು ಇಂದು ಕಲಬುರಗಿಯಲ್ಲಿ ಪ್ರಿಯಾಂಕ್​ ಖರ್ಗೆ ಪುನರುಚ್ಛರಿಸಿದ್ದಾರೆ.
ಕಳೆದ‌ ಮೂರು ವರ್ಷದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಈ ಸರ್ಕಾರ ಶೂನ್ಯ ಸಾಧನೆ ಮಾಡಿದೆ. ಸರ್ಕಾರಿ ಹುದ್ದೆ ಭರ್ತಿ ಮಾಡೋದಕ್ಕೆ ಮುಂದಾದಾಗ ಒಂದೊಂದೇ ಹಗರಣ ಹೊರ ಬರ್ತಿದೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆದು ಪಾಸ್ ಆಗುವವರಿಗೂ ಸೂಕ್ತ ಕೆಸಲ ಸಿಗ್ತಿಲ್ಲ. ಹಣ ಕೊಟ್ಟರಷ್ಟೇ ಉದ್ಯೋಗ. ಈ ಸರ್ಕಾರದಲ್ಲಿ ಪ್ರತಿ ಹುದ್ದೆಯೂ ಮಾರಾಟಕ್ಕಿದೆ. ಸಾಕಷ್ಟು ಮಂದಿ ತಮ್ಮ ಮಕ್ಕಳಿಗೆ ಉದ್ಯೋಗ ಸಿಗಲೆಂದು ಹೊಲ- ಮನೆ ಅಡವಿಟ್ಟಿದ್ದಾರೆ. ಅವರ ಕಷ್ಟ ಕೇಳೋರಿಲ್ಲ. ಬಡ ಮಕ್ಕಳಿಗೆ ಅನ್ಯಾಯ ಆಗ್ತಿದೆ ಎಂದು ಪ್ರಿಯಾಂಕ್​ ಖರ್ಗೆ ಆಕ್ರೋಶ ಹೊರಹಾಕಿದರು. ಎಸ್​ಡಿಎ 1321 ಹುದ್ದೆ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಲಾಗಿತ್ತು ಎಂದು ಸರ್ಕಾರಿ ಅಧಿಕಾರಿಗಳೇ ಹೇಳಿದ್ದಾರೆ ಎಂದು ಟೀಕಿಸಿದರು.
ಇನ್ನು ಪ್ರಿಯಾಂಕ್​ ಖರ್ಗೆ ಹೇಳಿದ ಲಂಚ-ಮಂಚ ಎಂಬ ಮಾತನ್ನು ಎಸ್​.ಆರ್​.ವಿಶ್ವನಾಥ್​ ತೀವ್ರವಾಗಿ ಖಂಡಿಸಿದ್ದಾರೆ. ನಾಲಗೆಯನ್ನು ಬಿಗಿಹಿಡಿದು ಮಾತನಾಡಬೇಕು ಎಂದು ತಾಕೀತು ಮಾಡಿದ್ದಾರೆ.
ಮುಕ್ತಿಗಾಗಿ ಬೆಂಕಿ ಹಚ್ಚಿಕೊಂಡ​: ಸಾಯುವ ಕೊನೇ ಕ್ಷಣದಲ್ಲಿ ಮಗ ಹೇಳಿದ ಮಾತು ಕೇಳಿ ಗಳಗಳನೇ ಕಣ್ಣೀರಿಟ್ಟ ಅಪ್ಪ…

ಕ್ರೈಸ್ಟ್ ಕಾಲೇಜಿನ 7 ವಿದ್ಯಾರ್ಥಿಗಳ ಹುಚ್ಚಾಟ: ಕೆರೆಗೆ ಕಾರು ಪಲ್ಟಿ

ತನಿಖೆಯಲ್ಲಿ ದಕ್ಷತೆ ಮೆರೆದ ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಇಲಾಖೆಯ ಪದಕ

ಮನೆ ಬಾಗಿಲಿಗೆ ಬಂದ ಗಿಫ್ಟ್​ ಕೂಪನ್​ ಆಸೆಗಾಗಿ 65 ಸಾವಿರ ರೂ. ಕಳೆದುಕೊಂಡ ಮಧುಗಿರಿಯ ಕುರಿಗಾಹಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
