ಬೆಂಗಳೂರು:ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸುತ್ತಿರುವ ಕಾಂಗ್ರೆಸ್​, ಇಂದು(ಗುರುವಾರ) ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿತು.
ಕಾಂಗ್ರೆಸ್ ಭವನದಿಂದ ಸಿಎಂ ಗೃಹ ಕಚೇರಿ ಕೃಷ್ಣಗೆ ಹೊರಟ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ರೇಸ್ ಕೋರ್ಸ್ ಬಳಿಯೇ ಪೊಲೀಸರು ತಡೆದರು. ಬ್ಯಾರಿಕೇಡ್ ಮೇಲೆ ಜಿಗಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುರ್ಜೇವಾಲಾ, ಸಲೀಂ ಅಹಮದ್ ಮುಂದೆ ಸಾಗಿದರು. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್​ ನಾಯಕರ ನಡುವೆ ವಾಗ್ವಾದ ನಡೆಯಿತು.
ಮೃತನ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಕೊಡಬೇಕು. ನಮ್ಮ ಕಾಂಗ್ರೆಸ್ ಪಕ್ಷದಿಂದ 11 ಲಕ್ಷ ರೂ. ಪರಿಹಾರ ಕೊಡ್ತೀವಿ. ಸರ್ಕಾರ ಕೆಲಸ ಕೊಡುವವರೆಗೂ ನಮ್ಮ ಆ ಭಾಗದ ನಾಯಕರು ಸಂತೋಷ್ ಪತ್ನಿಗೆ ಕೆಲಸ ಕೊಡ್ತಾರೆ. ಭ್ರಷ್ಟಾಚಾರದ ನಿಗ್ರಹ ಕಾಯ್ದೆಯಡಿ ದೂರು ದಾಖಲು ಆಗಬೇಕು. ಸಿಎಂ ಅವರು ಈಶ್ವರಪ್ಪ ಅವರನ್ನ ರಕ್ಷಣೆ ಮಾಡ್ತಿದ್ದಾರೆ. ಅವರ ಮೇಲೂ ಕೆಂಪಣ್ಣ ಕಮಿಷನ್ ಆರೋಪ ಮಾಡಿದ್ದಾರೆ. ಮಾನ ಮರ್ಯಾದೆ ಇದ್ದಿದ್ದರೆ ಈಶ್ವರಪ್ಪ ರಾಜೀನಾಮೆ ಕೊಡ್ತಿದ್ರು. ಬಿಜೆಪಿ ಅವರು ಭಂಡರು, ರಾಜೀನಾಮೆ ಕೊಡಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.
ಸಿಎಂ ನಿವಾಸ ತಲುಪುವ ಮೊದಲೇ ಪ್ರತಿಭಟನಾಕಾರರನ್ನು ಬ್ಯಾರಿಕೇಡ್ ಹಾಕಿ ಮುಂದೆ ಹೋಗದಂತೆ ತಡೆದ ಪೊಲೀಸರು, ಕೈ ನಾಯಕರನ್ನ ವಶಕ್ಕೆ ಪಡೆದರು.
ಗಲಾಟೆ ನಡುವೆಯೇ ಜೆಸಿಬಿ ತರಿಸಿ ಸಂತೋಷ್​ ಪಾಟೀಲ್​ ಅಂತ್ಯಕ್ರಿಯೆ

ಜ್ಯೋತಿಷಿ ಮಾತು ನಂಬಿ ಸಾವಿನ ಮನೆ ಬಿಟ್ಟು ಲಾಡ್ಜ್​ಗೆ ಹೋದ ಮಾಲೀಕನಿಗೂ-ಕುಟುಂಬಕ್ಕೂ ಕಾದಿತ್ತು ಭಾರಿ ಆಘಾತ!

ಸನ್ನಿ ಲಿಯೋನ್​ ಫ್ಯಾನ್ಸ್​ಗೆ ಬಂಪರ್​ ಆಫರ್​ ಕೊಟ್ಟ ಮಂಡ್ಯದ ಯುವಕ! ಆದ್ರೆ ಈ 3 ಷರತ್ತು ಪೂರೈಸಲೇಬೇಕು…

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × two =
Remember me
