ಬೆಂಗಳೂರು:ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಮಂಗಳವಾರ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ನಟಿ ಭಾವನಾಗೆ ಮಹಿಳಾ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಡಿಕೆಶಿ ಕುರ್ಚಿಪಕ್ಕದಲ್ಲಿ ಕುಳಿತುಕೊಳ್ಳಲು ಹೋಗಿದ್ದ ಭಾವನಾಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾರ್ಯಕರ್ತೆಯೊಬ್ಬರು, ‘ನೀವು ಬಿಜೆಪಿಯಲ್ಲಿದ್ರಿ ತಾನೇ? ಇವಾಗ ಇಲ್ಲಿಗೆ ಬಂದು ಅಧ್ಯಕ್ಷರ ಪಕ್ಕದಲ್ಲಿ ಕೂರೋಕೆ ಹೋಗ್ತಿದ್ದೀರಲ್ಲಾ?’ ಎಂದು ತರಾಟೆಗೆ ತೆಗೆದುಕೊಂಡರು. ಗಲಿಬಿಲಿಯಾಗಿ ಸಮಾಧಾನ ಮಾಡಲು ಮುಂದಾದ ನಟಿ ಭಾವನಾ ಮುಜುಗರಕ್ಕೆ ಒಳಗಾಗಿ ಪ್ರತಿಭಟನಾ ವೇದಿಕೆ ಮುಂಭಾಗದಿಂದ ಸೈಡ್​ಗೆ ಹೋಗಿ ನಿಂತರು.
ದಿಗ್ವಿಜಯ ನ್ಯೂಸ್​ ಜತೆ ಮಾತನಾಡಿದ ನಟಿ ಭಾವನಾ, ನಾನು ಕಾಂಗ್ರೆಸ್ ತೊರೆದು ಹೋಗಿದ್ದಕ್ಕೆ ಪಶ್ಚಾತ್ತಾಪ ಉಂಟಾಯಿತು. ಕೆಲವೊಂದು ಕಾರಣದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೆ. ಕಳೆದ ನಾಲ್ಕು ತಿಂಗಳ ಹಿಂದೆ ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದೇನೆ. ಯಾವುದೇ ಸ್ಥಾನ-ಮಾನದ ನೀರಿಕ್ಷೆ ನನಗೆ ಇಲ್ಲ. ಸಿದ್ದಾಂತದ ಆಧಾರದ ಮೇಲೆ ಕಾಂಗ್ರೆಸ್​ನಲ್ಲಿ ಕೆಲಸ ಮಾಡುತ್ತೇನೆ ಎಂದರು.
ರಾಜ್ಯಮಟ್ಟದ ಕಬ್ಬಡಿ ಪಂದ್ಯ ಆಟವಾಡುತ್ತಲೇ ಹಾರಿಹೋಯ್ತು ಆಟಗಾರನ ಪ್ರಾಣಪಕ್ಷಿ! ಮನಕಲಕುತ್ತೆ ಸಾವಿನ ಆ ದೃಶ್ಯ

ಪರಿಹಾರದ ಚೆಕ್ ರೆಡಿಯಾಗಿತ್ತು… ಸತ್ತಿದ್ದಾನೆ ಎನ್ನಲಾದ ವ್ಯಕ್ತಿ 13 ದಿನದ ಬಳಿಕ ಪ್ರತ್ಯಕ್ಷ! ಪತ್ನಿಯ ಕಣ್ಣೀರಿಗೆ ವಿಧಿ ಮನಸ್ಸು ಕರಗಿತೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
