ಬೆಂಗಳೂರು:‘ನ್ಯಾಷನಲ್ ಹೆರಾಲ್ಡ್’ ಹೆಸರಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ವಿಚಾರಣೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ಗುರುವಾರ ಬೆಂಗಳೂರಲ್ಲಿ ಬೃಹತ್​ ಪ್ರತಿಭಟನೆ ನಡೆಸಿದರು. ಈ ವೇಳೆ 2 ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ರಾಜಭವನ ಚಲೋ ಹೊರಟ ಕಾಂಗ್ರೆಸ್​ ಪಡೆಯನ್ನ ತಡೆಯಲು ಹಾಕಿದ್ದ ಬ್ಯಾರಿಕೇಡ್ ಮೇಲೆ ಹತ್ತಿದ ಡಿ.ಕೆ.ಶಿವಕುಮಾರ್​ ಪೊಲೀಸರ ಮೇಲೆ ಬಿದ್ದ ಪ್ರಸಂಗವೂ ನಡೆಯಿತು.
ಪ್ರಮುಖ ನಾಯಕರೆಲ್ಲ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನಾ ಸಭೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟರು. ಮಾರ್ಗಮಧ್ಯೆ ಪೊಲೀಸರಿಂದ ಬಂಧನಕ್ಕೊಳಗಾದರು. ಈ ಮುನ್ನ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಹತ್ತಿದ ಡಿ.ಕೆ.ಶಿವಕುಮಾರ್, ಪೊಲೀಸರ ಮೇಲೆ ಹಾರಿದರು.
ಇಡಿ ವಿರುದ್ಧದ ಹೋರಾಟಕ್ಕೆ ತೀವ್ರತೆ ತರುವ ಉದ್ದೇಶದಿಂದ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಎರಡು ಕಡೆ ಹಳೆಯ ಕಾರುಗಳನ್ನು ತಂದು ಬೆಂಕಿ ಇಟ್ಟ ಪ್ರಸಂಗ ನಡೆಯಿತು. ಶಾಂತಿನಗರದ ಇಡಿ ಕಚೇರಿ ಬಳಿ ಹಾಗೂ ಶೇಷಾದ್ರಿಪುರಂ ಬಳಿ 22-23 ವರ್ಷ ಹಳೆಯ ಕಾರುಗಳನ್ನು ತಂದು ಅದಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ಅವರನ್ನು ಬಂಧಿಸಿದರು.
ಸಿದ್ದರಾಮಯ್ಯ, ವೀರಪ್ಪ ಮೊಯ್ಲಿ, ಬಿ.ಕೆ.ಹರಿಪ್ರಸಾದ್, ರಮೇಶ್ ಕುಮಾರ್, ಕೃಷ್ಣಬೈರೇಗೌಡ, ಸಲೀಂ ಅಹ್ಮದ್, ಜಮೀರ್ ಅಹ್ಮದ್ ಸೇರಿದಂತೆ ಕಾಂಗ್ರೆಸ್​ ನಾಯಕರ ದಂಡೇ ಸೇರಿತ್ತು.
ಮಂಗಳೂರಲ್ಲಿ ವಿದ್ಯಾರ್ಥಿಗಳ ಚುಂಬನ ವಿಡಿಯೋ ವೈರಲ್​ ಬೆನ್ನಲ್ಲೇ ಕಾಮಪುರಾಣ ಲೀಕ್​!

ಆರತಕ್ಷತೆ ವೇಳೆ ಕುಸಿದು ಬಿದ್ದು ಮದುಮಗ ಸಾವು! ಹೊಸಪೇಟೆಯಲ್ಲಿ ದುರಂತ ಘಟನೆ

ಚಾಕೊಲೇಟ್​ ನುಂಗಿದ ಬಾಲಕಿ ಉಸಿರುಗಟ್ಟಿ ಸಾವು: ಬೈಂದೂರಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − four =
Remember me
