ಬೆಂಗಳೂರು:ರಾಜಭವನಕ್ಕೆ ಮುತ್ತಿಗೆ ಹಾಕಲು ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಕಾಂಗ್ರೆಸ್ ಭವನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನ ಇಂಡಿಯನ್ ಎಕ್ಸ್​​​​ಪ್ರೆಸ್​​ ವೃತ್ತದ ಬಳಿಯೇ ತಡೆದ ಪೊಲೀಸರು ಹಲವರನ್ನ ವಶಕ್ಕೆ ಪಡೆದರು. ಇದೇ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊತ್ತೊಯ್ದ ಪೊಲೀಸರು ವ್ಯಾನ್​ ಹತ್ತಿಸಿದ ಪ್ರಸಂಗ ನಡೆಯಿತು.
ಕೇಂದ್ರ ಸರ್ಕಾರ ಇಡಿ, ಐಟಿ ದಾಳಿ ಹೆಸರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಕೈ ಪಡೆ ಪ್ರತಿಭಟನೆ ನಡೆಸುತ್ತಿದೆ. ಇದರ ಮುಂದುವರಿದ ಭಾಗವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋಗೆ ಕರೆ ಕೊಟ್ಟಿದ್ದರು. ಬೆಳಗ್ಗೆ 10ಕ್ಕೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಹೊರಟ ಪಾದಯಾತ್ರೆ, ಇಂಡಿಯನ್​ ಎಕ್ಸ್​ಪ್ರೆಸ್​ ಬಳಿಗೆ ಬರುತ್ತಿದ್ದಂತೆ ಪೊಲೀಸರು ತಡೆದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವರನ್ನ ವಶಕ್ಕೆ ಪಡೆದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿರಾರು ಕೋಟಿ ಹಣದ ಅಕ್ರಮ ವರ್ಗಾವಣೆ ಆರೋಪದಲ್ಲಿ ಸಿಲುಕಿರುವ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್​ ಗಾಂಧಿ ಅವರನ್ನು ವಿಚಾರಣೆಗೆ ಕರೆದಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮವನ್ನು ವಿರೋಧಿಸಿ ನಾಲ್ಕೈದು ದಿನಗಳಿಂದ ದೇಶಾದ್ಯಂತ ಕಾಂಗ್ರೆಸ್​ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜಕೀಯ ಇತಿಹಾಸ ನಿರ್ಮಿಸಿದ ಹೊರಟ್ಟಿ: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ 8ನೇ ಬಾರಿಗೆ ಗೆದ್ದು ಬೀಗಿದ ಬಸವರಾಜ ಹೊರಟ್ಟಿ

ಅಕ್ಕನ ಚಿತೆಗೆ ಹಾರಿ ಪ್ರಾಣಬಿಟ್ಟ ತಮ್ಮ! ನೋವಲ್ಲೇ 430km ದೂರದಿಂದ ಬಂದವ ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
