ಬಾಗಲಕೋಟೆ:ಕಾಂಗ್ರೆಸ್​ ಪಕ್ಷದಲ್ಲಿ ಸಿಎಂ ರೇಸ್​ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್​ ನಡುವೆ ತೀವ್ರ ಪೈಪೋಟಿ ಇರುವುದು ಎಲ್ಲರಿಗೂ ಗೊತ್ತೇ ಇದೆ. ಇವರಿಬ್ಬರ ಕುರಿತು ಪರ-ವಿರೋಧ ಚರ್ಚೆಗಳು ಸ್ವಪಕ್ಷದಲ್ಲೇ ನಡೆಯುತ್ತಿದೆ. ಇದೀಗ ಇವರಿಬ್ಬರ ಹೊರತಾಗಿ ಮತ್ತೊಂದು ಹೆಸರು ಕೇಳಿಬಂದಿದೆ. ಈ ವ್ಯಕ್ತಿಯೇ ಸಿಎಂ ಆಗಲು ಸೂಕ್ತ, ಯೋಗ್ಯ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹೇಳಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ರಾಜ್ಯದಲ್ಲಿ ಸಿಎಂ ಆಗಲು ಕಾಂಗ್ರೆಸ್​ನಲ್ಲಿರುವ ಅತ್ಯಂತ ಯೋಗ್ಯ ವ್ಯಕ್ತಿ ಅಂದರೆ ಎಸ್​.ಆರ್. ಪಾಟೀಲ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇವರ ಹೆಸರನ್ನು ನಾನು ಶಿಫಾರಸು ಮಾಡಿದ್ದೆ. ಮುಖ್ಯಮಂತ್ರಿ ಆಗಲು ಅತ್ಯಂತ ಆದರ್ಶ, ಯೋಗ್ಯ ವ್ಯಕ್ತಿ ಅಂದ್ರೆ ಇವರೇ. ಪ್ರಾಮಾಣಿಕತೆ, ಸಜ್ಜನಿಕೆ ವ್ಯಕ್ತಿತ್ವವುಳ್ಳ ಸಾಕಾರರೂಪ ಎಸ್​.ಆರ್. ಪಾಟೀಲ ಎಂದು ಮೊಯ್ಲಿ ಹೇಳಿದರು.
ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಎಸ್​.ಆರ್. ಪಾಟೀಲ ಅವರ ಹುಟ್ಟುಹಬ್ಬದ ಹಿನ್ನೆಲೆ ಬೆಂಬಲಿಗರು ಮತ್ತು ಅಭಿಮಾನಿಗಳು ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮೊಯ್ಲಿ, ಕಾಂಗ್ರೆಸ್​ನಲ್ಲಿ ಸಿಎಂ ಆಗಲು ಸೂಕ್ತ ವ್ಯಕ್ತಿ ಅಂದ್ರೆ ಎಸ್​.ಆರ್. ಪಾಟೀಲ ಎಂದರು.
ಸಿದ್ದರಾಮೋತ್ಸವ ಹಿನ್ನೆಲೆ ಲಾಡ್ಜ್‌, ಹೋಟೆಲ್​, ರೆಸ್ಟೋರೆಂಟ್‌ಗಳು ಹೌಸ್‌ಫುಲ್! ಕೋಟ್ಯಂತರ ರೂಪಾಯಿ ವಹಿವಾಟು…

ಮೃತಪಟ್ಟ 30 ವರ್ಷದ ಬಳಿಕ ವಿವಾಹ! ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ನಡೆಯಿತು ಪ್ರೇತಗಳ ಮದ್ವೆ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:two × 3 =
Remember me
