ಬೆಳಗಾವಿ:ರಾಜ್ಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ ಪಕ್ಕ ಜಲಶಕ್ತಿ ಯೋಜನೆಗಳನ್ನು ಅನುಷ್ಠಾನ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಪಕ್ಕದಲ್ಲಿ ಜಲಶಕ್ತಿ ನಿರ್ಮಾಣ ಯೋಜನೆಗಳನ್ನು ಬೆಳಗಾವಿಯಿಂದಲೇ ಆರಂಭಿಸುವುದಾಗಿ ಘೋಷಿಸಿದರು.

ಧಾರ್ಮಿಕ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ವಿಶೇಷ ಯೋಜನೆ ಜಾರಿ ಮಾಡುವ ಮೂಲಕ ಬಹಳ ದಿನಗಳ ಕನಸನ್ನು ಕೇಂದ್ರ ಸರ್ಕಾರ ನನಸು ಮಾಡಿದೆ. ರಸ್ತೆಗಳ ಅಭಿವೃದ್ಧಿಯಲ್ಲಿ ನಿತಿನ್​ ಗಡ್ಕರಿ ಮಾದರಿ ಸಚಿವರಾಗಿದ್ದಾರೆ. ಈ ಹಿಂದೆ ಕರ್ನಾಟಕದಲ್ಲಿ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೆ ಏರಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಮೋದಿ ಆಡಳಿತದಲ್ಲಿ 35 ಸಾವಿರ ಕಿ.ಮೀ. ರಸ್ತೆ, ಬೆಳಗಾವಿಯಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಭೂ ಸ್ವಾಧೀನ ಸೇರಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಎಲ್ಲ ರಿಂಗ್ ರೋಡ್​ಗಳನ್ನು ಪೂರ್ಣಗೊಳಿಸಬೇಕು ಎಂದು ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರಿಗೆ ಸಿಎಂ ಮನವಿ ಮಾಡಿದರು.
ಬೆಂಗಳೂರು-ಚೆನ್ನೈ 2 ಗಂಟೆ ಪ್ರಯಾಣ:ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ‌ ಮಾತನಾಡಿ, ಬೆಂಗಳೂರು- ಚೆನ್ನೈ ‌ನಡುವಿನ ಪ್ರಯಾಣ ಅವಧಿ 2 ತಾಸು ಆಗುವಂತಹ ಹೆದ್ದಾರಿ ಎಕ್ಸ್‌ಪ್ರೆಸ್‌ ಡಿಸೆಂಬರ್​ನಲ್ಲಿ ಲೋಕಾರ್ಪಣೆ ಆಗಲಿದೆ. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ರಿಂಗ್ ರೋಡ್, ಮೇಲ್ಸೇತುವೆ ನಿರ್ಮಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದರು. ಹೆದ್ದಾರಿಗಳ ಪಕ್ಕದಲ್ಲಿ ಆರ್ಥಿಕ ಚಟುವಟಿಕೆಗಳು, ಕೈಗಾರಿಕೆಗಳ ಸ್ಥಾಪನೆ ಅವಶ್ಯಕ. ರಾಜ್ಯ ಸರ್ಕಾರ ಭೂ ಸ್ವಾಧೀನ ಮಾಡಿಕೊಟ್ಟರೆ ಕಾಮಗಾರಿ ಅರಂಭಿಸಲಾಗುವುದು ಎಂದರು.
Koo App
Taking the fast paced infrastructural development journey of Karnataka further, laid the foundation stone of 5 National Highway Projects in Belgavi in the august presence of CM Shri @bsbommai ji, Union Minister Shri Pralhad Joshi ji, Shri Govinda Makhtappa Karajol ji, Shri C.C.Patil ji, Shri Umesh Vishwanath Katti ji, MPs, MLAs, MLCs and senior officials. @joshipralhad
–Nitin Gadkari (@nitin.gadkari)28 Feb 2022

ಯೂಕ್ರೇನ್​ಗೆ ಸೇರಿದ್ದ ವಿಶ್ವದ ಅತಿದೊಡ್ಡ ವಿಮಾನವನ್ನೂ ನಾಶ ಮಾಡಿದ ರಷ್ಯಾ ಸೇನೆ!

ಕ್ರೇಜಿಸ್ಟಾರ್​ ರವಿಚಂದ್ರನ್​ ತಾಯಿ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
