ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಶುಕ್ರವಾರವೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ದಾವಣಗೆರೆ, ಗದಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಕೋಲಾರದಲ್ಲಿ ಏ.23ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗುವ ಜತೆಗೆ ಬಿಸಿಲಿನ ಧಗೆಯೂ ಹೆಚ್ಚಿದೆ.
ಶುಕ್ರವಾರ ರಾಜ್ಯದ ಇತರೆ ಜಿಲ್ಲೆಗಳಗಿಂತ ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನದಲ್ಲಿ 40.1 ಉಷ್ಣಾಂಶ ಹಾಗೂ ಧಾರವಾಡ ಮತ್ತು ಮಂಡ್ಯದಲ್ಲಿ ಕನಿಷ್ಠ ತಾಪಮಾನದಲ್ಲಿ ತಲಾ 20.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ತಡರಾತ್ರಿ ಪಂಪ್​ಸೆಟ್ ಕದಿಯಲು ಬಂದ ಯುವಕರಿಬ್ಬರನ್ನು ಅಮಾನುಷವಾಗಿ ಕೊಂದ ತೋಟದ ಮಾಲೀಕ!

ಪಕ್ಕದ ರೂಮಲ್ಲಿ ಗಂಡ ಮಲಗಿದ್ರೂ ನಡೆದೇ ಹೋಯ್ತು ಘೋರ ದುರಂತ! ಬೆಳಗ್ಗೆ ಪತ್ನಿಯ ಕೋಣೆಗೆ ಹೋದವನಿಗೆ ಕಾದಿತ್ತು ಶಾಕ್​

ಏ.26ಕ್ಕೆ ನನ್ನ ಮದ್ವೆ ಇದೆ, ದಯವಿಟ್ಟು ಎಲ್ಲಿಗಾದ್ರೂ ಓಡೋಗೋಣ… ಸಖತ್​ ವೈರಲ್​ ಆಗ್ತಿದೆ ಪ್ರಿಯತಮೆ ಸಂದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + fourteen =
Remember me
