ಬೆಂಗಳೂರು:ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ಅಥವಾ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರನ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ನೀಡಬೇಕು. ಕೂಡಲೇ ಗುತ್ತಿಗೆ ಹಣವನ್ನೂ ಬಿಡುಗಡೆ ಮಾಡಬೇಕು ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆಗ್ರಹಿಸಿದ್ದಾರೆ.
ಗುತ್ತಿಗೆದಾರ ಸಂತೋಷ್​ ಸಾವಿಗೆ ಸರ್ಕಾರವೇ ನೇರ ಹೊಣೆ. ಮೃತನ ಕುಟುಂಬಕ್ಕೆ ಸಾಂತ್ವಾನ ಹೇಳುವ ಬದಲು ಪರಿಹಾರ ನೀಡಬೇಕು. ಸಾವಿಗೆ ಯಾರು ಕಾರಣ ಅಂತ ಡೆತ್​ನೋಟ್​ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. 40% ಕಮಿಷನ್ ಕೇಳುತ್ತಿದ್ದಾರೆ ಅಂತ ಸಚಿವ ಈಶ್ವರಪ್ಪರ ವಿರುದ್ಧ ಸಂತೋಷ್​ ಆರೋಪ ಮಾಡಿದ್ದರು. ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರಿಗೂ ದೂರು ಸಲ್ಲಿಸಿದ್ದರು. ದೆಹಲಿಯಲ್ಲಿ ದೂರು ಕೊಟ್ಟಾಗಲೇ ಸ್ಪಂದನೆ ಮಾಡಿದ್ದರೆ ಸಂತೋಷ್​ ಜೀವ ಉಳಿಯುತ್ತಿತ್ತು. ಸಚಿವರು ಮಾನವೀಯತೆಯಿಂದ ನಡೆದುಕೊಂಡಿದ್ದರೆ ಒಂದು ಜೀವ ಬಲಿಯಾಗುತ್ತಿರಲಿಲ್ಲ ಎಂದು ಕೆಂಪಣ್ಣ ಆಕ್ರೋಶ ಹೊರಹಾಕಿದರು.
ಟೆಂಡರ್ ಕರೆಯೋಕೆ 5% ಕಮಿಷನ್ ಕೊಡ್ಬೇಕು. ಆರೋಗ್ಯ ಇಲಾಖೆಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೀತಾ ಇದೆ. ನೀರಾವರಿ ಇಲಾಖೆಯಲ್ಲೂ ಕಮಿಷನ್​ ದಂಧೆ ಹೆಚ್ಚಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ 4 ಬಾರಿ ದೂರು ಕೊಟ್ಟೆವು. ಆದರೂ ಪ್ರಯೋಜನವಾಗಿಲ್ಲ. ಆರೋಗ್ಯ ಇಲಾಖೆ, ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆಯಲ್ಲಿ ಹೆಚ್ಚಾಗಿ ಭ್ರಷ್ಟಾಚಾರ ನಡೆಯುತ್ತಿದೆ. ಈ ಸರ್ಕಾರ 40% ಕಮಿಷನ್ ಸರ್ಕಾರ ಎಂದು ಎಂದು ವಾಗ್ದಾಳಿ ನಡೆಸಿದರು.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ಕರೆದ ಈಶ್ವರಪ್ಪ: ಮಧ್ಯಾಹ್ನ ರಾಜೀನಾಮೆ ಘೋಷಣೆ ಸಾಧ್ಯತೆ

ಅಯ್ಯೋ ಅಣ್ಣ… ನಾನಷ್ಟು ಗೋಗರೆದ್ರೂ ಊಟ ಮಾಡದೆ ಕೆಲ್ಸ ಇದೆ ಅಂತ ಹೊರಟ್ಯಲ್ಲೋ: ಮಡಿಲಕ್ಕಿ ಕೊಟ್ಟು ಹಿಂತಿರುಗುವಾಗ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
