ದೋರನಹಳ್ಳಿ:ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಸಿಲಿಂಡರ್​ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. 19 ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಕೃಷ್ಣಾ ಭಾಗ್ಯ ಜಲನಿಗಮದ (ಕೆಬಿಜೆಎನ್​ಎಲ್​) ನಿವೃತ್ತ ನೌಕರನ ಮನೆಯಲ್ಲಿ ಶುಕ್ರವಾರ ಬೆಳಗ್ಗೆ ಸೀಮಂತ ಕಾರ್ಯಕ್ರಮ ನಡೆಯುತ್ತಿತ್ತು. ಮನೆ ಹೊರಗಡೆ ಅಡುಗೆಗೆ ಸಿದ್ಧತೆ ವೇಳೆ ಸಿಲಿಂಡರ್​ ಸ್ಫೋಟಗೊಂಡಿದ್ದು, ಸ್ಥಳದಲ್ಲಿದ್ದ 23ಕ್ಕೂ ಹೆಚ್ಚು ಜನರ ಕೈ, ಕಾಲು ಸುಟ್ಟಿವೆ. ಗಾಯಾಳುಗಳನ್ನು ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಎಲ್ಲರನ್ನೂ ಕಲುಬುರಗಿ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಹಾಂತೇಶ (15 ತಿಂಗಳ ಮಗು), ಆದ್ಯಾ (3) ಹಾಗೂ ನಿಂಗಮ್ಮ (85) ಶುಕ್ರವಾರ ಕೊನೆಯುಸಿರೆಳೆದರು. ಶನಿವಾರ ಗಂಗಮ್ಮ(51) ಮೃತಪಟ್ಟಿದ್ದಾರೆ. ಶಹಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾತ್ರೋರಾತ್ರಿ ಬಿಡದಿಯಲ್ಲಿ ಕಾಂಗ್ರೆಸ್​ ಮುಖಂಡನ ಭೀಕರ ಕೊಲೆ

ಪತ್ನಿ ನಾಪತ್ತೆ, ಗಂಡನ ಫೇಸ್​ಬುಕ್​ನಲ್ಲಿ ಶ್ರದ್ಧಾಂಜಲಿ ಪೋಸ್ಟ್​! ಅಬ್ಬಬ್ಬಾ ದೊಡ್ಡಬಳ್ಳಾಪುರದಲ್ಲಿ ಇದೆಂಥಾ ಹೈಡ್ರಾಮ?


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 7 =
Remember me
