ಚಿತ್ರದುರ್ಗ:ಕರೊನಾ 3ನೇ ಅಲೆ ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಘೋಷಿಸಿದರು.
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ವೇದಾಂತ್ ಮೈನ್ಸ್ ಕಂಪನಿ ನಿರ್ಮಿಸಿರುವ 6 ಕೋಟಿ ರೂ. ವೆಚ್ಚದ ನೂರು ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಕ್ಷೇತ್ರ ಆಸ್ಪತ್ರೆಗೆ ಸಿಎಂ ವರ್ಚ್ಯುವಲ್ ಮೂಲಕ ಗುರುವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ, ಕರೊನಾ 3ನೇ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಸರ್ವ ಸನ್ನದ್ಧವಾಗುತ್ತಿದೆ ಎಂದರು.
ರಾಜ್ಯದಲ್ಲಿ ಆರೋಗ್ಯ ಸೌಕರ್ಯ ಸುಧಾರಿಸಲು ಸಂಘ-ಸಂಸ್ಥೆಗಳು, ವಿವಿಧ ಕಂಪನಿಗಳು ಸರ್ಕಾರದೊಂದಿಗೆ ಕೈ ಜೋಡಿಸುತ್ತಿವೆ ಎಂದು ಸಿಎಂ ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಆಸ್ಪತ್ರೆ ಆವರಣದಲ್ಲಿ ಭೀಮಸಮುದ್ರದ ಶ್ರೀಮತಿ ಹಾಲಮ್ಮ, ಶ್ರೀ ಜಿ.ಎಂ.ಮಲ್ಲಿಕಾರ್ಜುನಪ್ಪ ಚಾರಿಟಬಲ್ ಟ್ರಸ್ಟ್​ನಿಂದ ಅಂದಾಜು 60 ಲಕ್ಷ ರೂ. ವೆಚ್ಚದ ಆಕ್ಸಿಜನ್ ಉತ್ಪಾದನಾ ಘಟಕ(333 ಎಲ್‌ಪಿಎಂ ಸಾಮರ್ಥ್ಯ)ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಅವರು ಮಂಜೂರು ಮಾಡಿರುವ 1.25 ಕೋಟಿ ರೂ. ವೆಚ್ಚದ ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಶೀಘ್ರದಲ್ಲೇ ಹೊಸದುರ್ಗ ಆಸ್ಪತ್ರೆ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸುವುದಾಗಿ ಹೇಳಿದರು.
ಸಂಸದರಾದ ಜಿ.ಎಂ.ಸಿದ್ದೇಶ್ವರ್, ಎ.ನಾರಾಯಣಸ್ವಾಮಿ, ಶಾಸಕರಾದ ಕೆ.ಪೂರ್ಣಿಮಾ, ಟಿ.ರಘುಮೂರ್ತಿ, ಜಿ.ಎಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಡಿಸಿ ಕವಿತಾ ಎಸ್.ಮನ್ನಿಕೇರಿ, ಎಸ್ಪಿ ಜಿ.ರಾಧಿಕಾ, ಜಿಪಂ ಸಿಇಒ ಡಾ.ಕೆ. ನಂದಿನಿದೇವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷ ಎ.ಮುರುಳಿ, ಡಿಎಚ್‌ಒ ಡಾ.ಸಿ.ಎಲ್. ಫಾಲಾಕ್ಷ, ಡಿಎಸ್ ಡಾ.ಎಚ್.ಜೆ. ಬಸವರಾಜಪ್ಪ ಮತ್ತಿತರರು ಇದ್ದರು.
ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ವಿದೇಶದಿಂದ ಬೀದರ್​ಗೆ ಬಂದ ಮಗನೂ ದುರಂತ ಅಂತ್ಯ!

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 7 =
Remember me
