ತುಮಕೂರು:ರಾಜ್ಯ ರಾಜಧಾನಿ ಸಮೀಪದ ತುಮಕೂರು ಜಿಲ್ಲೆಯಲ್ಲಿ ಕರೊನಾ ಅಟ್ಟಹಾಸ ದಿನದಿಂದ ದಿನಕ್ಕೇ ಹೆಚ್ಚುತ್ತಲೇ ಇದೆ. ಸಾವು-ನೋವಿನ ಪ್ರಮಾಣ ಕ್ಷಣಕ್ಷಣಕ್ಕೂ ಏರುತ್ತಿದ್ದು, ಮದುವೆ ಸಂಭ್ರಮದಲ್ಲಿ ಮಿಂದೇಳಬೇಕಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಹಾಲುಕಟ್ಟೆ ಗೊಲ್ಲರಟ್ಟಿ ಗ್ರಾಮದ 28 ವರ್ಷದ ಯುವಕನಿಗೆ ನಾಲ್ಕು ದಿನದಳ ಹಿಂದೆ ಕರೊನಾ ಸೋಂಕು ತಗುಲಿತ್ತು. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಸಿಗದೆ ಪರದಾಡಿ ತಿಪಟೂರಿಗೆ ತೆರಳಿದ್ದರು. ತಿಪಟೂರಲ್ಲೂ ಬೆಡ್ ಸಿಗದೆ ಹಾಸನದ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಿದ್ದರು.
ಆಸ್ಪತ್ರೆಗೆ ದಾಖಲಿಸಿದ ಅರ್ಧಗಂಟೆಯಲ್ಲೇ‌ ಯುವಕ ಕೊನೆಯುಸಿರೆಳೆದಿದ್ದಾನೆ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಯಲ್ಲಿ ಬೆಡ್​ ಜತೆಗೆ ಚಿಕಿತ್ಸೆ ಸಿಕ್ಕಿದ್ದರೆ ಆತ ಬದುಕುಳಿಯುತ್ತಿದ್ದ ಎಂದು ಮೃತನ ಕುಟುಂಬಸ್ಥರು ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಅಂದುಕೊಂಡಂತೆ ಎಲ್ಲವೂ ಆಗಿದ್ದರೆ ಯುವಕನ ಮದುವೆ ಶೀಘ್ರದಲ್ಲೇ ನೆರವೇರುತ್ತಿತ್ತು. ಇತ್ತೀಚಿಗಷ್ಟೆ ಯುವಕ ಮದುವೆ ನಿಶ್ಚಯವಾಗಿದ್ದು, ಕುಟುಂಬಸ್ಥರು ಸಿದ್ಧತೆಯಲ್ಲಿ ತೊಡಗಿದ್ದರು. ಇದೀಗ ಕರೊನಾ ರೂಪದಲ್ಲಿ ಬಂದ ಜವರಾಯ ಯುವಕನ ಪ್ರಾಣ ಹೊತ್ತೊಯ್ದಿದ್ದು, ಮೃತನ ಕುಟುಂಬಸ್ಥರಿಗೆ ದಿಕ್ಕುತೋಚದಂತಾಗಿದೆ. ಮೃತ ಯುವಕ ತುಮಕೂರು ನಗರದ ಖಾಸಗಿ ಮೊಬೈಲ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದ.
ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಸಿನಿಮಾ ಮತ್ತು ರಾಜಕೀಯಕ್ಕೆ ಶಾಶ್ವತ ಗುಡ್ ​ಬೈ ಹೇಳಿದ ರಮ್ಯಾ! ಇನ್ನೆಂದೂ ಬಣ್ಣದ ಲೋಕಕ್ಕೆ ಬರಲ್ಲ ಎಂದ ಮೋಹಕ ತಾರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 18 =
Remember me
