ಬೆಂಗಳೂರು:ಕರ್ನಾಟಕಕ್ಕೆ ಆಕ್ಸಿಜನ್​ ಪೂರೈಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿದೆ ಎಂದು ನಿನ್ನೆ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಇಂದು ರಾಜ್ಯದ ಬಿಜೆಪಿ ನಾಯಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ? ಜಡ್ಜ್‌ಗಳು ಸರ್ವಜ್ಞರಲ್ಲ, ಕರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು. ನೇಣು ಹಾಕಿಕೊಳ್ಳಲು ಆಗುತ್ತಾ?. ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ, ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ… ಇವುಗಳು ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತು ಎಂದು ಟ್ವೀಟ್​ ಮೂಲಕ ರಾಜ್ಯ ಸರ್ಕಾರವನ್ನ ಎಚ್​ಡಿಕೆ ಕಟುವಾಗಿ ಟೀಕಿಸಿದ್ದಾರೆ.
ಕೇರಳ, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ ಎಂದು ಕುಮಾರಸ್ವಾಮಿ ಸರಣಿ ಟ್ವೀಟ್​ ಮಾಡಿದ್ದಾರೆ.
ಬಿಜೆಪಿ ನಾಯಕರು ಕೈಲಾಗದ ಮಾತನ್ನು ಬಿಡಬೇಕು. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ ಮತ್ತು ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ‘ನಿಮ್ಮ ಕರ್ತ್ಯವ್ಯ ನೀವು ಮಾಡಿ.’ ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ ಎಂದು ಕಿವಿಹಿಂಡಿದ್ದಾರೆ.
ಪ್ರಿಯಕರನಿಗಾಗಿ ವಿಷ ಕುಡಿದು ಬದುಕಿದ ಪ್ರೇಯಸಿಯನ್ನ ರಾತ್ರೋರಾತ್ರಿ ಸುಟ್ಟುಹಾಕಿದ್ರು! ಬೆಚ್ಚಿಬೀಳಿಸುತ್ತೆ ಮರ್ಯಾದಾ ಹತ್ಯೆ

ಕರೊನಾ ಪಾಸಿಟಿವ್​ ಬಂದರೂ ಮದ್ವೆ ಮನೆಗೆ ಬಂದ ವಕೀಲ! ಪ್ರಶ್ನಿಸಿದ್ದಕ್ಕೆ ಉಡಾಫೆ, ಮುಂದೆ ಆಗಿದ್ದೆಲ್ಲವೂ ಅವಾಂತರ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
