ಬೆಂಗಳೂರು:ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಆದರೂ ಲಾಕ್​ಡೌನ್​ ನಿಯಮಗಳನ್ನು ಜನ ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹಾಗಾಗಿ ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಗೃಹ ಸಚಿವ, ಜನರು ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟಾರ್​ ಸೈಕಲ್​ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ‌. ಹೀಗಾಗಿ ವಾಹನಗಳನ್ನು ಸೀಜ್ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿ ಮಾಡಲಾಗುವುದು. ಈಗ ಜಾರಿಯಲ್ಲಿರುವ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಮೂಲಕ ಲಾಕ್​ಡೌನ್​ ಅನ್ನು ಯಶಸ್ವಿ ಗೊಳಿಸಲಾಗುವುದು ಎಂದರು.
ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು ಮೂರ್ನಾಲ್ಕು ದಿನ ನಿರಂತರವಾಗಿ ಲಾಕ್​ಡೌನ್​ ಜಾರಿ ಮಾಡಿದ್ದಾರೆ. ಆದರೂ ಜನ ಗಂಭೀರತೆಯನ್ನ ಅರಿತು ಕೊಳ್ಳುತ್ತಿಲ್ಲ. ಲಾಕ್​ಡೌನ್​ಗೆ ಸಹಕಾರ ನೀಡುತ್ತಿಲ್ಲ. ಲಾಕ್​ಡೌನ್​ ಏಕೆ ಜಾರಿಯಾಗಿದೆ ಎಂಬುದನ್ನ ಅರ್ಥ ಮಾಡಿಕೊಳ್ಳದಿದ್ದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ ಎಂದು ಗೃಹ ಸಚಿವರು ಬೇಸರ ವ್ಯಕ್ತಪಡಿಸಿದರು.
ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಬಿಜೆಪಿ ಶಾಸಕ ಪಿ.ರಾಜೀವರ ತಾಯಿ ಕರೊನಾಗೆ ಬಲಿ

ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 13 =
Remember me
