ಮಂಡ್ಯ:ಕೋವಿಡ್​ ಸೋಂಕಿತ ವ್ಯಕ್ತಿಯೊಬ್ಬ ಆಸ್ಪತ್ರೆ ಆವರಣದಲ್ಲೇ ನೇಣಿಗೆ ಶರಣಾದ ಘಟನೆ ಶ್ರೀರಂಗಪಟ್ಟಣದಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಜಯಕುಮಾರ್(37) ಆತ್ಮಹತ್ಯೆ ಮಾಡಿಕೊಂಡವ. ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆಯ ಕೋವಿಡ್​ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.
ಆಸ್ಪತ್ರೆಗೆ ದಾಖಲಾದಾಗಿನಿಂದಲೂ ಜಯಕುಮಾರ್​ಗೆ ಕರೊನಾ ಬಗ್ಗೆ ಭಯ ಹೆಚ್ಚಾಗಿತ್ತು ಎಂದು ತಿಳಿದು ಬಂದಿದೆ, ಭಾನುವಾರ ಆಸ್ಪತ್ರೆಯಲ್ಲೂ ಆಕ್ಸಿಜನ್ ಪಡೆದು ತಾನು ರೋಗದಿಂದ ನರಳಿ ಸಾಯಬಹುದೆಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಗೆ ತೆರಳಿ ಪುನಃ ತಾಲೂಕು ಆಸ್ಪತ್ರೆಗೆ ಬಂದಿದ್ದರು.
ಕರೊನಾ ಮೇಲಿನ ಆತಂಕ ಹೆಚ್ಚಾಗಿ ಸೋಮವಾರ ಮುಂಜಾನೆ 4ರ ವೇಳೆ ಆಸ್ಪತ್ರೆಯ ಆವರಣದ ಹಿಂಭಾಗದ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಜಯಕುಮಾರ್​ ಸತ್ತಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮುಖ್ಯವೈದ್ಯಾಧಿಕಾರಿ ಡಾ.ಮಾರುತಿ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಶ್ರೀರಂಗಪಟ್ಟಣ ಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರಿಕೆಟ್​ ಆಟಗಾರ್ತಿ ವೇದಾಕೃಷ್ಣಮೂರ್ತಿ ತಾಯಿ ಕರೊನಾಗೆ ಬಲಿ

ರುಂಡ-ಮುಂಡ-ಕೈಕಾಲು ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ​: ಶವದೊಂದಿಗೆ ಪ್ರಯಾಣಿಸಿದ್ದ ನಟಿ ಶನಾಯ, ಬೆಚ್ಚಿಬೀಳಿಸುತ್ತೆ ಟ್ರಾವೆಲ್ ಹಿಸ್ಟರಿ

ನೇಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ, ಗಂಡನ ಆ ಕಿರುಕುಳಕ್ಕೆ ಬಲಿಯಾದಳೇ ಪತ್ನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − seven =
Remember me
