ಮಂಡ್ಯ:ಕರೊನಾ ರೂಲ್ಸ್​ ಬ್ರೇಕ್​ ಮಾಡಿ ನೂರಾರು ಜನರ ಸಮ್ಮುಖದಲ್ಲಿ ಮಂಡ್ಯ ತಹಸೀಲ್ದಾರ್ ಚಂದ್ರಶೇಖರ ಶಂಗಾಳಿ ಅವರು ಮಗನ ಬರ್ತ್​ ಡೇ ಪಾರ್ಟಿಯನ್ನು ಭರ್ಜರಿಯಾಗಿ ಆಚರಿಸಿದ್ದು, ವಿಡಿಯೋ ವೈರಲ್​ ಆಗಿದೆ.
ಶ್ರೀರಂಗಪಟ್ಟಣ ತಾಲೂಕು ಕೆಆರ್‌ಎಸ್ ಅಣೆಕಟ್ಟೆ ಬಳಿಯ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಬುಧವಾರ ಸಂಜೆಯಿಂದ ತಡರಾತ್ರಿವರೆಗೂ ಪಾರ್ಟಿ ನಡೆದಿದ್ದು, ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನೂ ಕಾಪಾಡಿಕೊಳ್ಳದೆ ಜನ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ. ತಹಸೀಲ್ದಾರ್ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ಕರೊನಾ ಹಿನ್ನೆಲೆ ಕಾರ್ಯಕ್ರಮಗಳಲ್ಲಿ 30ಕ್ಕಿಂತ ಹೆಚ್ಚು ಜನ ಸೇರದಂತೆ ಡಿಸಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ. ಇದ್ಯಾವುದಕ್ಕೂಕ್ಯಾರೆ ಎನ್ನದ ತಹಸೀಲ್ದಾರ್​ ಮಾತ್ರ ತನ್ನ ಮಗನ ಬರ್ತ್​ ಡೇ ಪಾರ್ಟಿಯನ್ನು ಅದ್ದೂರಿಯಾಗಿ ಮಾಡಿದ್ದಾರೆ. ಈ ಪಾರ್ಟಿಯಲ್ಲಿ ಪಾಂಡವಪುರ ತಹಸೀಲ್ದಾರ್ ಪ್ರಮೋದ್ ಪಾಟೀಲ್ ಸೇರಿದಂತೆ ಹಲವು ಅಧಿಕಾರಿಗಳು, ಸಂಘಟನೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು. ತಹಸೀಲ್ದಾರ್ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಬಿಜೆಪಿಗೆ ಬಂದ ಶಾಸಕ ಮಹೇಶ್​ಗೆ ವೇದಿಕೆಯಲ್ಲೇ ಸಿಹಿ ಸುದ್ದಿ ಕೊಟ್ಟ ಬಿಎಸ್​ವೈ!

ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಬಂಗಲೆ! ಅರೇಬಿಯನ್‌ ಶೈಲಿಯ ಅರಮನೆಗೆ ಚಿನ್ನದ ಲೇಪನ…

VIDEO| ಆಗುಂಬೆ ಘಾಟ್​ನಲ್ಲಿ ಚಲಿಸುತ್ತಿದ್ದ ಟ್ರಕ್​ ಪ್ರಪಾತದತ್ತ… ಅಬ್ಬಾ.. ಜಸ್ಟ್​ ಮಿಸ್​!

Sign in to your account
Please enter an answer in digits:nineteen − three =
Remember me
