ಗದಗ:ಕರೊನಾ ವ್ಯಾಕ್ಸಿನ್ ಹಾಕಿಸಿಕೊಂಡವರಿಗೆ ಮಾತ್ರ ಸಿಗಲಿದೆ ಪಡಿತರ! ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಗೆ ಈ ಗ್ರಾಮದಲ್ಲಿ ಸಿಗಲ್ಲ ರೇಶನ್ ಇಲ್ಲ…ಯಾರು ವ್ಯಾಕ್ಸಿನ್ ಹಾಕಿಸಿಕೊಳ್ಳುವದಿಲ್ಲವೋ ಅಂತಹ ಕುಟುಂಬಗಳಿಗೆ ಪಡಿತರ ಕೊಡಬಾರದು. ಇಂತಹದ್ದೊಂದು ರೂಲ್ಸ್​ ಜಾರಿಗೆ ತರಲು ಗದಗ ಜಿಲ್ಲೆ ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕರೊನಾ ಹಿನ್ನೆಲೆ ನಡೆದ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯವನ್ನ ಸರ್ವಾನುಮತದಿಂದ ಕೈಗೊಳ್ಳಲಾಗಿದೆ. ವ್ಯಾಕ್ಸಿನೇಶನ್ ಹಾಕಿಸಿಕೊಂಡವರಿಗೆ ಆರೋಗ್ಯ ಇಲಾಖೆ ಪತ್ರ ನೀಡಲಿದೆ. ಪಡಿತರ ಚೀಟಿದಾರರು ತಮ್ಮ ಪಡಿತರ ಕಾರ್ಡ್​ನೊಂದಿಗೆ ವ್ಯಾಕ್ಸಿನ್ ಹಾಕಿಸಿಕೊಂಡ ಪತ್ರ‌ವನ್ನೂ ತರಬೇಕು. ಅಂತಹವರಿಗೆ ಮಾತ್ರವೇ ಪಡಿತರ ವಿತರಣೆ ಮಾಡಲಾಗುತ್ತದೆ.
ಕೆಲವರು ವ್ಯಾಕ್ಸಿನ್​ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. 45 ವರ್ಷ ವಯಸ್ಸು ದಾಟಿದ್ದರೂ ಲಸಿಕೆ ಪಡೆಯಲು ಬರುತ್ತಿಲ್ಲ. ಹಾಗಾಗಿ ಜನರ ಆರೋಗ್ಯ ದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಆದರೆ, ಕರೊನಾ ಲಸಿಕೆಗಾಗಿ ರಾಜ್ಯಾದ್ಯಂತ ಲಕ್ಷಾಂತರ ಮಂದಿ ನಿತ್ಯ ಅಲೆಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಇಲ್ಲಿನ ಗ್ರಾಪಂ ತೆಗೆದುಗೊಂಡ ಈ ನಿರ್ಧಾರ ಅಚ್ಚರಿ ತರಿಸಿದೆ ಎನ್ನುತ್ತಿದ್ದಾರೆ ಸಾರ್ವಜನಿಕರು.
ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + four =
Remember me
