ಬೆಂಗಳೂರು:ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯಗಳಲ್ಲಿ ವಿವಿಧ ಸ್ನಾತಕ ಪದವಿಗಳಿಗೆ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಸಿಎಆರ್​) ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕೆ-ಸಿಇಟಿ ಕೋಟಾದಡಿ ಭರ್ತಿಯಾಗದೆ ಉಳಿದಿರುವ ಸೀಟುಗಳನ್ನು ಪ್ರವರ್ಗವಾರು ಹಂಚಿಕೆ ಮಾಡಲು ಮಾ.16 ರಿಂದ 19ರವರೆಗೆ ಜಿಕೆವಿಕೆ ಆವರಣದಲ್ಲಿ ಮುಕ್ತ ಕೌನ್ಸೆಲಿಂಗ್​ ಆಯೋಜಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಇಂದು(ಮಾ.11) ಕೊನೇ ದಿನ.
2021-22ನೇ ಸಾಲಿನ ಪ್ರಥಮ ವರ್ಷದ ಕೃಷಿ ಸ್ನಾತಕ ಪದವಿಗಳಿಗೆ ರಾಜ್ಯದ ಎಲ್ಲ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಲು ಐಸಿಎಆರ್​ ಪರೀಕ್ಷೆ ಮತ್ತು ಕೆಇಎ ನಡೆಸುವ ಕೆ-ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಆಯ್ಕೆಯಾದ ಕೆಲ ವಿದ್ಯಾರ್ಥಿಗಳು ದಾಖಲಾಗದ ಹಿನ್ನೆಲೆಯಲ್ಲಿ ಸೀಟುಗಳು ಖಾಲಿ ಉಳಿದಿವೆ. ಈ ಸೀಟುಗಳನ್ನು ಹಂಚಿಕೆ ಮಾಡಲು ಕೌನ್ಸೆಲಿಂಗ್​ ಆಯೋಜಿಸಿದ್ದು, ಪರೀಕ್ಷೆ ಬರೆದ ಕರ್ನಾಟಕ ಅಭ್ಯರ್ಥಿಗಳು ಭಾಗವಹಿಸಬಹುದು.
ಆಸಕ್ತರು ಮಾಹಿತಿಗೆ ಎಲ್ಲ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯಗಳ ಅಧಿಕೃತ ಜಾಲತಾಣ:www.uasbangalore.edu.in,www.uasd.edu.in,www.uasraichur.edu.in,www.uhsbagalkot.edu.in,www.uahs.edu.inಗೆ ಭೇಟಿ ನೀಡಿ ಅರ್ಜಿ ಡೌನ್​ಲೋಡ್​ ಮಾಡಿಕೊಂಡು ಮಾ.11ರೊಳಗೆ ಕುಲಸಚಿವರು, ಕೃವಿವಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು.
ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ರೆ ವಿಷಾದಿಸುವೆ… ಮಾಜಿ ಶಾಸಕರಿಗೆ ಪತ್ರ ಬರೆದು ಕ್ಷಮೆ ಕೋರಿದ ಡಿಕೆಶಿ

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

ತುಮಕೂರು ಮಾಜಿ ಕಾರ್ಪೋರೇಟರ್​ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 7 =
Remember me
