ಬೆಂಗಳೂರು:ಖಾಸಗಿ ಬ್ಯಾಂಕ್ ನಿಂದ ನಿರಂತರ ಕಿರುಕುಳ ತಾಳಲಾರದೆ ಸೀಮೆಎಣ್ಣೆ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆ ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲೇ ನಡೆದಿದೆ.
ಬುಧವಾರ 11. 45 ಗಂಟೆಗೆ ವಿಧಾನಸೌಧ ಮೂರನೇ ಗೇಟ್ ಬಳಿ ಈ ಘಟನೆ ನಡೆದಿದೆ. ಕುಟುಂಬ ಸಮೇತ ಬಂದ ಶಾಹಿಸ್ತ ಬಾನು ಎಂಬುವವರು ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು‌ ಅವರನ್ನು ವಶಕ್ಕೆ ಪಡೆದುಕೊಂಡರು.
ತಕ್ಷಣವೇ ಮಧ್ಯೆ ಪ್ರವೇಶಿಸಿದ ಪೊಲೀಸರು ಸಂತ್ರಸ್ತ ಕುಟುಂಬವನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಸಮಯ ಪ್ರಜ್ಞೆ ಮತ್ತು ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಅನಾಹುತ ತಪ್ಪಿದೆ.
ಜೆಜೆ ನಗರದ ಶಾಯಿಸ್ತಾ ದಂಪತಿ ಬ್ಯಾಂಕ್‌ನಿಂದ ಸಾಲಪಡೆದಿದ್ದರು. ಸಾಲ ಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್​ನವರು ಜಮೀನು ಹರಾಜು ಹಾಕಿದ್ದರು. ಇದರಿಂದ ಮನನೊಂದು ​​ಶಾಯಿಸ್ತಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೆ ದಂಪತಿಯನ್ನು ತಡೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
