ಚಾಮರಾಜನಗರ:ದಂಪತಿಗಳಿಬ್ಬರು ಸಾವಿನಲ್ಲೂ ಒಂದಾಗಿರುವ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಂಗಲ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶೇಖರ್​ (70) ಹಾಗೂ ಸುಮಿತ್ರಮ್ಮ (65) ಎಂದು ಗುರುತಿಸಲಾಗಿದೆ. ದಂಪತಿಗಳಿಬ್ಬರು ಕೃಷಿಕರಾಗಿದ್ದು, ಗ್ರಾಮ ಸಮೀಪದ ರಾಮನಗುಡ್ಡ ಬಳಿಯ ಜಮೀನಿನಲ್ಲಿ ವಾಸವಿದ್ದರು.
ಶೇಖರ್​ ಅವರ ಪತ್ನಿ ಸುಮಿತ್ರಮ್ಮಗೆ ಶುಕ್ರವಾರ (ಆಗಸ್ಟ್​ 23) ಮುಂಜಾನೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಕಾಮಗೆರೆ ಬಳಿ ಇರುವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಮಿತ್ರಮ್ಮ ರಾತ್ರಿ ಮೃತಪಟ್ಟಿದ್ದು, ಈ ವಿಚಾರ ತಿಳಿದು ಪತಿ ಶೇಖರ್​ ಹೃದಯಾಘಾತದಿಂದ ಅಸುನೀಗಿದ್ದಾರೆ. ಮೃತರಿಗೆ ಓರ್ವ ಪುತ್ರ, ಪುತ್ರಿ ಇದ್ದು, ಸಾವಿನ ಸುದ್ದಿ ತಿಳಿದ ಗ್ರಾಮಸ್ಥರು ಕಂಬನಿ‌ ಮಿಡಿದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 16 =
Remember me
