ಮಂಗಳೂರು:ಕೋವಿಡ್​ ಸೋಂಕಿಗೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ನೋವಿನಲ್ಲೇ ಬಂದು ಮೃತದೇಹ ಪಡೆದ ಸಂಬಂಧಿಕರಿಗೆ ಅಂತ್ಯಸಂಸ್ಕಾರಕ್ಕೂ ಮುನ್ನ ಶಾಕ್​ ಕಾದಿತ್ತು. ಇದು ತಮ್ಮವರದ್ದಲ್ಲ, ಬೇರೆ ಯಾರದ್ದೋ ಎಂದು ಗೊತ್ತಾಗುತ್ತಿದ್ದಂತೆ ಕಕ್ಕಾಬಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಸೋಮವಾರ) ಸಂಭವಿಸಿದೆ.
ಸುರತ್ಕಲ್‌ನ ರೀಜೆಂಟ್‌ ಪಾರ್ಕ್‌ನ ಜಗದೀಶ್‌ ಶೆಟ್ಟಿ(65) ಎಂಬುವವರು ಕೋವಿಡ್ ಸೋಂಕಿನಿಂದ ಸುರತ್ಕಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಶವವನ್ನು ಮೃತರ ಕುಟುಂಬಸ್ಥರಿಗೆ ಆಸ್ಪತ್ರೆಯವರು ಹಸ್ತಾಂತರಿಸಿದ್ದರು.
ಆದರೆ ಮೃತದೇಹದಲ್ಲಿ ಕಾರ್ಕಳದ ಸುಧಾಕರ ಶೆಟ್ಟಿ ಹೆಸರಿರುವುದನ್ನ ಜಗದೀಶ್​ರ ಕುಟುಂಬಸ್ಥರ ಗಮನಕ್ಕೆ ಬಂದಿದ್ದು, ಮೃತದೇಹ ಅದಲು-ಬದಲು ಆಗಿರುವುದು ಗೊತ್ತಾಗಿದೆ. ಕೂಡಲೇ ಈ ಬಗ್ಗೆ ಆಸ್ಪತ್ರೆಯವರ ಗಮನಕ್ಕೆ ತಂದರು. ಅಷ್ಟರಲ್ಲಿ ಜಗದೀಶ್‌ ಶೆಟ್ಟಿ ಅವರ ಮೃತದೇಹವನ್ನು ಸುಧಾಕರ ಶೆಟ್ಟಿ ಶವ ಎಂದು ಕಾರ್ಕಳಕ್ಕೆ ತೆಗೆದುಕೊಂಡು ಹೋಗಲಾಗಿತ್ತು.
ಅಂತ್ಯಸಂಸ್ಕಾರಕ್ಕೂ ಮುನ್ನವೇ ವಿಚಾರ ಗೊತ್ತಾಗುತ್ತಿದ್ದಂತೆ ವಾಪಸ್​ ಜಗದೀಶ್‌ ಶೆಟ್ಟಿ ಶವವನ್ನು ಸುರತ್ಕಲ್‌ನ ಆಸ್ಪತ್ರೆಗೆ ತರಲಾಯಿತು.
ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ತಾಯಿ ಗರ್ಭದಿಂದ ಮಗುವಿನ ಕಾಲು ಹೊರ ಬಂದಿದೆ.. ಯಾರಾದರೂ ಹೆರಿಗೆ ಮಾಡಿ… ಆಸ್ಪತ್ರೆ ಬಾಗಿಲಲ್ಲಿ ಕುಟುಂಬಸ್ಥರ ಆಕ್ರಂದನ

ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ಕರೊನಾದಿಂದ ಶಿಕ್ಷಕ ಸಾವು, ಪಿಪಿಇ ಕಿಟ್ ಧರಿಸಿ ಅಂತ್ಯಸಂಸ್ಕಾರ ನೇರವೇರಿಸಿದ ವಿದ್ಯಾರ್ಥಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + eleven =
Remember me
