ವಿಜಯನಗರ:ಈ ಪ್ರಕೃತಿಯೇ ವಿಸ್ಮಯಗಳ ಆಗರ. ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಹೀಗೆ ಯಾರಿಗೂ, ಯಾವ ಕ್ಷೇತ್ರಕ್ಕೂ ನಿಲುಕದ ನಿಗೂಢಗಳು ಅದೆಷ್ಟೋ ಈ ಭೂಮಿಯ ಮೇಲೆ ನಡೆದಿವೆ, ನಡೆಯುತ್ತಲೇ ಇವೆ. ಅವುಗಳ ಪೈಕಿ ಕೆಲವು ಘಟನೆಗಳಿಗೆ ವೈಜ್ಞಾನಿಕ ಮೂಲ ನೀಡಿದರೂ, ಇನ್ನೆಷ್ಟೋ ಘಟನೆಗಳು ಊಹೆಗೂ ಮೀರಿದ್ದೇ ಆಗಿವೆ.
ಇದೀಗ ಮತ್ತೊಂದು ವಿಸ್ಮಯಕಾರಿ ಘಟನೆ ರಾಜ್ಯದ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಹೌದು, ಕೂಡ್ಲಿಗಿ ತಾಲೂಕಿನ ಹಾರಕಬಾವಿ ಗ್ರಾಮದಲ್ಲಿ ಹಸುವೊಂದು 2 ಕಾಲುಗಳನ್ನು ಹೊಂದಿರುವ ಕರುವಿಗೆ ಜನ್ಮ ನೀಡಿದೆ. ಕರುವಿಗೆ ಎರಡೇ ಕಾಲು ಇರುವುದನ್ನು ಕಂಡು ಗ್ರಾಮಸ್ಥರಿಗೆ ಆಶ್ಚರ್ಯವಾಗಿದೆ.
ಸದ್ಯ ಕರು ಹಾಗೂ ತಾಯಿ ಹಸು ಆರೋಗ್ಯವಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಈ ಹಿಂದೆ ಕೂಡ್ಲಗಿ ತಾಲೂಕಿನ ಚೌಡಪುರ ಹಾಗೂ ಗುಡೆಕೋಟೆ ಗ್ರಾಮದಲ್ಲೂ ಎರಡು ಕಾಲು ಇರೋ ಕರು ಜನನವಾಗಿತು, ಇಂತಹ ಅಪರೂಪದ ಕರು ಇದೀಗ ಹಾರಕಬಾವಿ ಗ್ರಾಮದಲ್ಲಿ ಜನಿಸಿದೆ.
ಎರಡು ಮುಂಗಾಲುಗಳನ್ನು ಹೊಂದಿರದೆ ಕೇವಲ ಎರಡು ಹಿಂಗಾಲುಗಳನ್ನು ಮಾತ್ರ ಹೊಂದಿರುವ ಗಂಡು ಕರುವಿಗೆ ಹಸು ಜನ್ಮ ನೀಡಿದೆ. ಇದು ಗ್ರಾಮಸ್ಥರಲ್ಲಿ ಬಹು ಅಚ್ಚರಿ ಮೂಡಿಸಿದ್ದಲ್ಲದೆ, ಸುದ್ದಿ ತಿಳಿದ ನೆರೆ ಹೊರೆಯ ಗ್ರಾಮಗಳ ಗ್ರಾಮಸ್ಥರು, ನೆಂಟರು ಕರುವನ್ನು ನೋಡಲು ಧಾವಿಸುತ್ತಿದ್ದಾರೆ.
ಅಂದು 3 ಕಾಲಿನ ಕರು ಜನನ, ಇಂದು ಗುಡೇಕೋಟೆಯಲ್ಲಿ ಎರಡು ಕಾಲಿನ ಕರುವಿಗೆ ಜನ್ಮ ಕೊಟ್ಟ ಹಸು

ಎರಡು ತಲೆ, ನಾಲ್ಕು ಕಣ್ಣು, ಎರಡು ಬಾಯಿ, ಜೋಡಿ ಕಿವಿ ಹೊಂದಿದ ವಿಚಿತ್ರ ಕರು ಜನನ: ಜೀವಂತವಾಗಿರುವುದೇ ಅಚ್ಚರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
