ಬೆಂಗಳೂರು:ಗಂಭೀರ ಸ್ವರೂಪ, ಹೀನ ಕೃತ್ಯದ ಅಪರಾಧಿಗಳ ತ್ವರಿತ ಪತ್ತೆ ಹಾಗೂ ನೊಂದವರಿಗೆ ನ್ಯಾಯ ಕೊಡಿಸುವ ದಿಕ್ಕಿನಲ್ಲಿ ರಾಜ್ಯ ಸರ್ಕಾರ ಗಮನಾರ್ಹ ಹೆಜ್ಜೆಯಿಟ್ಟಿದ್ದು, ದೇಶದಲ್ಲಿಯೇ ಮೊದಲ ಬಾರಿಗೆ ಅಪರಾಧ ಕೃತ್ಯದ ಸ್ಥಳ ಪರಿಶೀಲನಾ ಅಧಿಕಾರಿಗಳ ಹುದ್ದೆಗಳನ್ನು ಸೃಜಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ವಿಧಾನಸೌಧ ಮಹಾದ್ವಾರದ ಬಳಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಸಬಲೀಕರಣಕ್ಕೆ ವಿವಿಧ ಯೋಜನೆಗಳ ಸಮರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಅಪರಾಧ ಕೃತ್ಯದ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳ ಆದೇಶ ಪ್ರತಿಯನ್ನು ಪೊಲೀಸ್ ಮಹಾ ನಿರ್ದೇಶಕರಿಗೆ ಹಸ್ತಾಂತರಿಸಿದ ನಂತರ ಮಾತನಾಡಿದ ಸಿಎಂ ಬಿಎಸ್‌ವೈ, ಗುರುತರ ಜವಾಬ್ದಾರಿಯನ್ನು ಪೊಲೀಸ್ ಇಲಾಖೆ ನಿಷ್ಠೆಯಿಂದ ನಿರ್ವಹಿಸುತ್ತಿದ್ದು, ಇಲಾಖೆ ಮೂಲ ಸವಲತ್ತು ಸುಧಾರಣೆ, ಪೊಲೀಸರು ಮತ್ತು ಅವರ ಕುಟುಂಬ ಸದಸ್ಯರ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಸಲಹೆಯಂತೆ ಅಪರಾಧ ಘಟನಾ ಸ್ಥಳದ ಪರಿಶೀಲನಾ ಅಧಿಕಾರಿ ಹುದ್ದೆಗಳನ್ನು ಸೃಷ್ಟಿಸಿದ್ದು, ಮೊದಲ ಹಂತದಲ್ಲಿ 206 ಅಧಿಕಾರಿಗಳ ನೇಮಕವಾಗಿದೆ. ಹೊಸ ಸೃಜನೆಯಾದ ಹುದ್ದೆಗಳಿಗೆ ನೇಮಕವಾದ ಅಧಿಕಾರಿಗಳಿಗೆ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ತರಬೇತಿ ನೀಡಲಾಗುವುದು ಎಂದರು.
ಶಾಸಕ ಅರ್ಷದ್ ರಿಜ್ವಾನ್, ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣಸೂದ್ ಉಪಸ್ಥಿತರಿದ್ದರು.
ಸುಮಲತಾ ದೊಡ್ಡವರು, ನಮ್ಮ ತಪ್ಪುಗಳನ್ನ ಹೊಟ್ಟೆಗೆ ಹಾಕೊಳ್ಬೇಕು…

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಮುಕ್ತ ವಿವಿಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 11 ಹೊಸ ಕೋರ್ಸ್​ ಪ್ರಾರಂಭ

ಪ್ರಿಯಕರನ ಮನೆಯಲ್ಲಿ ಯುವತಿ ಶವ ಪತ್ತೆ! ಮೃತಳ ಪೋಷಕರಿಂದ ನಡೆದೇ ಹೋಯ್ತು ಘೋರ ದುರಂತ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:7 + sixteen =
Remember me
