ಬೆಂಗಳೂರು:ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳಗೊಳಿಸಿ ಬಿ.ಎಸ್. ಯಡಿಯೂರಪ್ಪ ಅಧಿಕೃತ ಆದೇಶ ಹೊರಡಿಸಿದ್ದು, ಆ ಮೂಲಕ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಕರೊನಾ ಕಾರಣಕ್ಕೆ 2020ರ ಜನವರಿಯಿಂದ ತುಟ್ಟಿಭತ್ಯೆ ತಡೆ ಹಿಡಿದ ಪರಿಣಾಮ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಕಳೆದ ಮೂರು ಕಂತುಗಳ ತುಟ್ಟಿಭತ್ಯೆ ಲಭ್ಯವಾಗಿರಲಿಲ್ಲ. ಅಖಿಲ ಭಾರತ ಸೂಚ್ಯಂಕ ಆಧರಿಸಿ ಕೇಂದ್ರ ಸರ್ಕಾರ ಕಳೆದ ವಾರ ತನ್ನ ನೌಕರರ ಶೇ.11ರಷ್ಟು ತುಟ್ಟಿಭತ್ಯೆ ಘೋಷಣೆ ಮಾಡಿತ್ತು. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಮಂಜೂರು ಮಾಡಬೇಕೆಂಬ ಬೇಡಿಕೆ ಇತ್ತು.
ಈ ಮನವಿಗೆ ಸ್ಪಂದಿಸಿದ್ದ ಯಡಿಯೂರಪ್ಪ ಅವರು ಅಧಿಕಾರ ಪದತ್ಯಾಗ ಮಾಡುವ ಕೊನೇ ಕ್ಷಣದಲ್ಲಿ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 11.25ರಿಂದ 12.50ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ನೌಕರರು, ನಿಗಮ ಮಂಡಳಿ ನೌಕರರು, ಪಿಂಚಣಿದಾರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದರಿಂದ ಸರ್ಕಾರಕ್ಕೆ 250 ಕೋಟಿ ರೂ. ಹೊರೆ ಬೀಳುತ್ತಾದರೂ 6 ಲಕ್ಷ ಸರ್ಕಾರಿ ನೌಕರರು, 3 ಲಕ್ಷ ನಿಗಮ ಮಂಡಳಿ ನೌಕರರು, 4.50 ಲಕ್ಷ ಪಿಂಚಣಿದಾರರಿಗೆ ಅನುಕೂಲ ಆಗಲಿದೆ. ಜು.1ರಿಂದ ಮಂಜೂರಾಗುವ ತುಟ್ಟಿಭತ್ಯೆ ಮೂಲ ವೇತನದಲ್ಲಿ ಸೇರ್ಪಡೆಗೊಳ್ಳಲಿದೆ.
ಡಿಎ ಹೆಚ್ಚಳದ ಲೆಕ್ಕಾಚಾರ:ಸರಾಸರಿ 50-60 ಸಾವಿರ ವೇತನ ಪಡೆಯುವ ನೌಕರರ ಸಂಖ್ಯೆ ಹೆಚ್ಚಿದ್ದು, ಅವರಿಗೆ 5-6 ಸಾವಿರ ಹೆಚ್ಚಾಗಲಿದೆ. ಒಂದು ಲಕ್ಷ ಪಡೆಯುವವರಿಗೆ 10 ಸಾವಿರ ಅಧಿಕವಾಗಲಿದೆ. ನಿವೃತ್ತ ನೌಕರರಿಗೆ ಸರಾಸರಿ 2.5 ಸಾವಿರದಿಂದ 4 ಸಾವಿರ ರೂ.ವರೆಗೆ ಪಿಂಚಣಿ ಹೆಚ್ಚಾಗಲಿದೆ.
ಇದು ಶಿವಮೊಗ್ಗ ಕೌತುಕ! ಅತಿ ಹೆಚ್ಚು ಸಿಎಂ ಕೊಟ್ರೂ ಎಲ್ಲರ ಅಧಿಕಾರವೂ ಅರ್ಧಚಂದ್ರ, ಇದೆಂಥ ಕಂಟಕ?

ಇಲ್ಲಿವೆ ‘ಅಭಿನಯ ಶಾರದೆ’ಯ ಅಪರೂಪದ ಫೋಟೋಗಳು

VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

ದುಂಡಗೆ, ದಪ್ಪಗಿದ್ದ ಕಮಲಾಗೆ ಸಹಪಾಠಿಗಳು ಕೊಟ್ಟ ಕೀಟಲೆ ಅಷ್ಟಿಷ್ಟಲ್ಲ! ಅದೇ ಬಾಲೆ ಜಯಂತಿ ಆದ ಇಂಟ್ರೆಸ್ಟಿಂಗ್​ ಸ್ಟೋರಿ ಇದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 10 =
Remember me
