ಕಲಬುರಗಿ:ನಾಡಿನ ಪ್ರಸಿದ್ಧ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್​ಸೈಟ್​ಗಳು ಪತ್ತೆಯಾಗಿವೆ. ನಕಲಿ ವೆಬ್​ಸೈಟ್​ಗಳನ್ನು ತೆರೆದು ಪೂಜೆ, ಹೋಮದ ಹೆಸರಲ್ಲಿ ಕೋಟ್ಯಂತರ ರೂಪಾಯಿ ಧೋಖಾ ಮಾಡಲಾಗಿದೆ.
ಮುಜರಾಯಿ ಇಲಾಖೆ ಅಧೀನದ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸರ್ಕಾರದ ಅಧಿಕೃತ ವೆಬ್​ಸೈಟ್​ ಇರುವಾಗಲೇ ಕೆಲ ಅರ್ಚಕರು ಗೊಂದಲ ಮೂಡಿಸುವಂಥ ಹೆಸರುಗಳಲ್ಲಿ ವೆಬ್​ಸೈಟ್​ ಆರಂಭಿಸಿ ಭಕ್ತರಿಗೆ ಮಕ್ಮಲ್​ ಟೋಪಿ ಹಾಕಿ ಸರ್ಕಾರಿ ಖಜಾನೆಗೆ ಸೇರಬೇಕಿದ್ದ ಕೋಟ್ಯಂತರ ಹಣ ಲಪಟಾಯಿಸಿದ್ದಾರೆ.
ಅಕ್ರಮವಾಗಿ ವೆಬ್​ಸೈಟ್​ ತೆರೆದಿರುವ ಆರೋಪದ ಮೇರೆಗೆ ಅರ್ಚಕರಾದ ವಲ್ಲಭ ಭಟ್ಟ ಪೂಜಾರಿ, ಅಂಕುರ್​ ಪೂಜಾರಿ, ಪ್ರತಿಕ್​ ಪೂಜಾರಿ, ಗಂಗಾಧರ ಭಟ್ಟ ಪೂಜಾರಿ, ಶರತ್​ ಭಟ್ಟ ಪೂಜಾರಿ ಇತರರ ವಿರುದ್ಧ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ನಾಮದೇವ ನೀಡಿದ ದೂರಿನನ್ವಯ ದೇವಲಗಾಣಗಾಪುರ ಪೊಲೀಸ್​ ಠಾಣೆಯಲ್ಲಿ ಗುರುವಾರ ಎಫ್​ಐಆರ್​ ದಾಖಲಾಗಿದೆ. ಸಿಪಿಐ ಜಗದೇವಪ್ಪ ಪಾಳಾ ತನಿಖೆ ಆರಂಭಿಸಿದ್ದು, ಹಲವು ಮಾಹಿತಿ ಕಲೆ ಹಾಕುವ ಕೆಲಸ ನಡೆದಿದೆ.
ದೇವಸ್ಥಾನ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಯಶವಂತ ಗುರುಕರ್​ ಮಂಗಳವಾರ ಸಭೆ ನಡೆಸಲು ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳಿದಾಗ ದೇಗುಲ ಮತ್ತು ಕ್ಷೇತ್ರದ ಹೆಸರಿನಲ್ಲಿ ನಕಲಿ ವೆಬ್​ಸೈಟ್​ಗಳನ್ನು ಕೆಲ ಅರ್ಚಕರು ತೆರೆದು ಸರ್ಕಾರದ ಬೊಕ್ಕಸಕ್ಕೆ ಹಾನಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ತನಿಖೆ ಬಳಿಕ ಎಲ್ಲವೂ ಬಯಲಿಗೆ:ದತ್ತಾತ್ರೇಯ ದೇವಸ್ಥಾನ ಹೆಸರಿನಲ್ಲಿ ಆರೇಳು ನಕಲಿ ವೆಬ್​ಸೈಟ್​ ಪತ್ತೆಯಾಗಿದ್ದು, ದೂರು ದಾಖಲಿಸಲಾಗಿದೆ. ತನಿಖೆಯಲ್ಲಿ ಎಲ್ಲ ಸತ್ಯಾಂಶ ಬಯಲಿಗೆ ಬರಲಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಯಶವಂತ ಗುರುಕರ್​ ತಿಳಿಸಿದ್ದಾರೆ. ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ನಕಲಿ ವೆಬ್​ಸೈಟ್​ಗಳ ಪೈಕಿ ಒಂದು ಖಾತೆಗೆ ಸುಮಾರು 28 ಸಾವಿರ ಭಕ್ತರು ಭೇಟಿ ನೀಡಿರುವುದು ಬೆಳಕಿಗೆ ಬಂದಿದೆ. ಈ ಎಲ್ಲ ನಕಲಿ ವೆಬ್​ಸೈಟ್​ಗಳಲ್ಲಿ ಖಾತೆ ಸಂಖ್ಯೆ ನೀಡಿ ಹಣಕಾಸು ವಹಿವಾಟು ನಡೆದಿದೆ. ಆದರೆ ಎಷ್ಟು ಪ್ರಮಾಣದಲ್ಲಿ ಆಗಿದೆ ಎಂಬುದು ನಿಖರವಾಗಿ ಗೊತ್ತಿಲ್ಲ. ತನಿಖೆ ಬಳಿಕ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಕಂಠದಲ್ಲಿ ಶ್ರೀಕೃಷ್ಣ! ಗಂಟಲು ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಕಾದಿತ್ತು ಶಾಕ್​

ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

ಕೂಲಿ ಕೆಲಸಕ್ಕಾಗಿ ಆಂಧ್ರದಿಂದ ಚಿಕ್ಕಬಳ್ಳಾಪುರಕ್ಕೆ ಬಂದವ ಈಗ ಕೋಟ್ಯಧೀಶ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × five =
Remember me
