ಬೆಂಗಳೂರು:ಪದವಿ ಮತ್ತು ಡಿಪ್ಲೊಮಾ ಸೆಮಿಸ್ಟರ್​ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳೊಳಗಾಗಿ ಮುಗಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸೂಚಿಸಿದ್ದಾರೆ.
ಪರೀಕ್ಷೆಗಳು ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ಉನ್ನತ ಶಿಕ್ಷಣ ಮಂಡಳಿ ಸದಸ್ಯರ ಜತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ, ಡಿಸಿಎಂ, ಬೆಸ ಸೆಮಿಸ್ಟರ್​ಗಳ (1, 3, 5) ಡಿಪ್ಲೊಮಾ ಪ್ರಾಯೋಗಿಕ ಪರೀಕ್ಷೆಗಳು ಜುಲೈ 26ರಿಂದ 28 ಮತ್ತು ಇವೇ ಸೆಮಿಸ್ಟರ್​ಗಳ ಉಳಿದ ವಿಷಯಗಳ ಥಿಯರಿ ಪರೀಕ್ಷೆಗಳು ಮತ್ತಿತರೆ ಸೆಮಿಸ್ಟರ್​ಗಳ ಪರೀಕ್ಷೆಗಳು ಅ.2ರಿಂದ 21ರವರೆಗೆ ನಡೆಸಲು ಸೂಚಿಸಲಾಗಿದೆ ಎಂದರು.
ಇನ್ನು ಸಮ ಸೆಮಿಸ್ಟರ್​ಗಳಾದ 2, 4 6ರ ಡಿಪ್ಲೊಮಾ ಪ್ರಾಯೋಗಿಕ ಪರೀಕ್ಷೆಗಳನ್ನು ನವೆಂಬರ್ 2ರಿಂದ 12ರವರೆಗೆ ಹಾಗೂ ಇವೇ ಸೆಮಿಸ್ಟರ್​ಗಳ ಥಿಯರಿ ಪರೀಕ್ಷೆಗಳನ್ನು ನ.17ರಿಂದ ಡಿಸೆಂಬರ್ 6ರವರೆಗೆ ನಡೆಸಲಾಗುವುದು. ಎಲ್ಲ ಪರೀಕ್ಷೆಗಳಲ್ಲೂ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ಅಶ್ವತ್ಥನಾರಾಯಣ್ ಹೇಳಿದರು.
ಬಹುತೇಕ ಎಲ್ಲ ವಿವಿಗಳು ಪರೀಕ್ಷೆಗಳನ್ನು ಮುಗಿಸಿದ್ದು, ಕೋವಿಡ್ ಲಾಕ್​ಡೌನ್ ಕಾರಣಕ್ಕೆ ಕರ್ನಾಟಕ ವಿವಿ, ಕಲಬುರಗಿ ವಿವಿ, ಬೆಂಗಳೂರು ವಿವಿ ಪರೀಕ್ಷೆ ನಡೆಸಲು ಸಾಧ್ಯವಾಗಿಲ್ಲ. ಅವುಗಳನ್ನು ಅಕ್ಟೋಬರ್ ತಿಂಗಳೊಳಗೆ ನಡೆಸಲಾಗುವುದು ಎಂದರು.
ಪಿಎಸ್​ಐ ಆಗಿರುವ ತಾಯಿ ವಿರುದ್ಧವೇ ಗದಗ ಎಸ್​ಪಿಗೆ ದೂರು ಕೊಟ್ಟ ಯುವತಿ!

ಚಿಕ್ಕಮ್ಮನ ಮನೆಯಲ್ಲಿ ಜೋಕಾಲಿ ಆಟವಾಡುತ್ತಿದ್ದ ಬಾಲಕನ ಪ್ರಾಣವನ್ನೇ ಹೊತ್ತೊಯ್ದ ಜವರಾಯ!

ಪಕ್ಕದೂರಲ್ಲಿ 22 ವರ್ಷದ ಯುವತಿ ಸಾವು! ಶವದ ಪಕ್ಕದಲ್ಲೇ ಇತ್ತು ಆಸಿಡ್​, ಚಾಕು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − fourteen =
Remember me
