ಬೆಂಗಳೂರು:ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ವ್ಯಕ್ತಿಯೊಬ್ಬರು ಕೋರಿದ್ದ ಮಾಹಿತಿ ಒದಗಿಸಲು 2 ವರ್ಷ ವಿಳಂಬ ಮಾಡಿದ್ದ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗೆ (ಪಿಐಒ) ಒಟ್ಟು 35 ಸಾವಿರ ರೂ. ದಂಡ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
ಮಾಹಿತಿ ಒದಗಿಸಲು ವಿಳಂಬ ಮಾಡಿದ್ದ ಪಿಐಒಗೆ ದಂಡ ವಿಧಿಸಿದ ಕರ್ನಾಟಕ ಮಾಹಿತಿ ಆಯೋಗದ ಕ್ರಮ ಪ್ರಶ್ನಿಸಿ ವೈಟ್‌ಫೀಲ್ಡ್ ನಿವಾಸಿ ಸಿಜೋ ಸೆಬಾಸ್ಟಿನ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಪ್ರಕರಣದಲ್ಲಿ ಅರ್ಜಿದಾರರು ಕೋರಿದ್ದ ಮಾಹಿತಿ ಒದಗಿಸಲು 2 ವರ್ಷ ವಿಳಂಬ ಮಾಡಿದ್ದರೂ ತಪ್ಪಿತಸ್ಥ ಅಧಿಕಾರಿಗೆ ದಂಡ ವಿಧಿಸಿದ ಆಯೋಗದ ಕ್ರಮ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ಪೀಠ, ವಿಳಂಬ ಮಾಡಿದ ಕೆ.ಆರ್.ಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಪಿಐಒ ಶಂಕರ್‌ಗೆ 25 ಸಾವಿರ ರೂ. ದಂಡ ವಿಧಿಸಿತಲ್ಲದೆ, ಅರ್ಜಿದಾರರಿಗೆ 10 ಸಾವಿರ ರೂ. ಪರಿಹಾರ ಪಾವತಿಸುವಂತೆ ಆದೇಶಿಸಿದೆ. ದಂಡ ಹಾಗೂ ಪರಿಹಾರದ ಮೊತ್ತವನ್ನು ಶಂಕರ್ 30 ದಿನಗಳಲ್ಲಿ ಪಾವತಿಸಬೇಕು. ಒಂದು ವೇಳೆ ಹಣ ಪಾವತಿ ವಿಳಂಬವಾದರೆ, ಮೊದಲ 30 ದಿನಗಳಿಗೆ ಶೇ.2 ಹಾಗೂ ನಂತರದ ದಿನಗಳಿಗೆ ಶೇ.3 ಬಡ್ಡಿ ಪಾವತಿಸಬೇಕು ಎಂದು ಆದೇಶದಲ್ಲಿ ಹೈಕೋರ್ಟ್ ಹೇಳಿದೆ.
ಪ್ರಕರಣವೇನು?:ಅರ್ಜಿದಾರರು ಆರ್‌ಟಿಐ ಕಾಯ್ದೆಯಡಿ ಕೆಲ ಮಾಹಿತಿ ಕೋರಿ ಕೆ.ಆರ್.ಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ 2019ರಲ್ಲಿ ಅರ್ಜಿ ಸಲ್ಲಿಸಿದ್ದರು. ನಿಗದಿತ ಅವಧಿ ಪೂರ್ಣಗೊಂಡರೂ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಪಿಐಒ ಶಂಕರ್ ವಿರುದ್ಧ 2020ರಲ್ಲಿ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ್ದ ಆಯೋಗ ಶಂಕರ್‌ಗೆ 2021ರ ನ.10ರಂದು ನೋಟಿಸ್ ಜಾರಿ ಮಾಡಿತ್ತು. ಈ ಮಧ್ಯೆ, ಡಿ.13ರಂದು ಅರ್ಜಿದಾರರು ಕೋರಿದ್ದ ಮಾಹಿತಿಯನ್ನು ಶಂಕರ್ ಪೋಸ್ಟ್ ಮೂಲಕ ಅರ್ಜಿದಾರರಿಗೆ ಒದಗಿಸಿದ್ದರು. ಅದನ್ನು ಪರಿಗಣಿಸಿದ ಆಯೋಗ 2022ರ ಜ.25ರಂದು ಮೇಲ್ಮನವಿಯನ್ನು ಇತ್ಯರ್ಥ್ಯಪಡಿಸಿತ್ತು.
ಅರ್ಜಿದಾರರ ವಾದವೇನು?:ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ಅರ್ಜಿದಾರರು, ನಿಗದಿತ ಅವಧಿಯೊಳಗೆ ಮಾಹಿತಿ ನೀಡಲು ವಿಳಂಬವಾದರೆ ಪ್ರತಿ ದಿನಕ್ಕೆ 250 ರೂ. ದಂಡ ವಿಧಿಸಲು ಮಾಹಿತಿ ಹಕ್ಕು ಕಾಯ್ದೆಯಡಿ ಅವಕಾಶವಿದ್ದು, ಗರಿಷ್ಠ 25 ಸಾವಿರ ರೂ. ದಂಡ ವಿಧಿಸಬಹುದಾಗಿದೆ. ಆದರೆ, ಶಂಕರ್ ಅವರು ಮಾಹಿತಿ ಒದಗಿಸಲು 2 ವರ್ಷ ವಿಳಂಬ ಮಾಡಿದ್ದರೂ, ಆಯೋಗ ಅವರಿಗೆ ದಂಡ ವಿಧಿಸದೆ, ಔಪಚಾರಿಕವಾಗಿ ಮೇಲ್ಮನವಿ ಇತ್ಯರ್ಥಪಡಿಸಿದೆ. ಸಾರ್ವಜನಿಕ ನಿಯಮಗಳಡಿ ಕಾರ್ಯ ನಿರ್ವಹಿಸುವ ಆಯೋಗ ಒಂದು ಅರೆನ್ಯಾಯಿಕ ಪ್ರಾಧಿಕಾರವಾಗಿದ್ದು, ಮಹಾರಾಜ ಅಥವಾ ಮೊಘಲ್ ಮಾದರಿಯಲ್ಲಿ ವರ್ತಿಸಲು ಸಾಧ್ಯವಿಲ್ಲ. ಮಾಹಿತಿ ನೀಡಲು ವಿಳಂಬ ಮಾಡುವ ಮೂಲಕ ತಪ್ಪು ಮಾಡಿರುವ ಅಧಿಕಾರಿಗೆ ಆಯೋಗ ದಂಡ ವಿಧಿಸದಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದರು.
ಮನೆ-ಮನೆಗೂ ತಲಾ 5 ಸಾವಿರ ರೂಪಾಯಿ ದಾನ ಮಾಡ್ತೀನಿ: ಕೆಜಿಎಫ್​ ಬಾಬು ಘೋಷಣೆ

ಬೆಂಗಳೂರಲ್ಲಿ ‘ಸುಂದರಿ ಪತ್ನಿ’ ಮೇಲೆ ಆ್ಯಸಿಡ್ ಎರಚಿ ಕೊಂದ ಗಂಡ! ವಿಕೃತಿ ಮೆರೆದವನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 7 =
Remember me
