ಬೆಂಗಳೂರು:ಮಲ್ಲೇಶ್ವರ ಕ್ಷೇತ್ರದ ಮಲ್ಲೇಶ್ವರ ವಾರ್ಡ್‌ನಲ್ಲಿ ಬಹುಮಹಡಿ ಕಟ್ಟಡ, ಮೈಸೂರು ಲ್ಯಾಂಪ್ಸ್ ಬಳಿ ರೈಲ್ವೆ ಕೆಳಸೇತುವೆ, ಯಶವಂತಪುರ ರೈಲ್ವೆ ಮೇಲ್ಸೇತುವೆ ವಿಸ್ತರಣೆ, ನಿರ್ಮಲ ರಾಣಿ ಶಾಲೆ ಬಳಿ ರೈಲ್ವೆ ಪಾದಚಾರಿ ಕೆಳಸೇತುವೆ ಕಾಮಗಾರಿಗಳ ಶಂಕುಸ್ಥಾಪನೆಗೆ ಹಾಗೂ ಬಹುಮಹಡಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಚಾಲನೆ ನೀಡಿದರು.
ಯಶವಂತಪುರ ಬಳಿ ಬಿಎಂಟಿಸಿ ಬಸ್ ನಿಲ್ದಾಣ ಪಕ್ಕದ ಪಟೇಲ್ ಭೈರಹನುಮಯ್ಯ ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ ನಿವಾಸಿಗಳಿಗಾಗಿ 4.95 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ 60 ಮನೆಗಳ ಬಹುಮಹಡಿ ಕಟ್ಟಡ, 4 ಕೋಟಿ ರೂ. ವೆಚ್ಚದಲ್ಲಿ 44 ಮನೆಗಳ ಬಹುಮಹಡಿ ಕಟ್ಟಡ, ವಾಹನ ದಟ್ಟಣೆ ನಿವಾರಣೆಗಾಗಿ ನೈಋತ್ಯ ರೈಲ್ವೆ ಸಹಭಾಗಿತ್ವದಡಿ 12.92 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಯಶವಂತರಪುರ ಮೇಲ್ಸೇತುವೆ ಅಗಲೀಕರಣ, 15 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಲ್ಯಾಂಪ್ಸ್ ಬಳಿ ರೈಲ್ವೆ ಕೆಳಸೇತುವೆ ನಿರ್ಮಾಣ ಹಾಗೂ ಮಲ್ಲೇಶ್ವರದ 18ನೇ ಅಡ್ಡ ರಸ್ತೆಯ ನಿರ್ಮಲ ರಾಣಿ ಶಾಲೆ ಬಳಿ 5 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಪಾದಚಾರಿ ಕಾಮಗಾರಿಯನ್ನು ನಿರ್ಮಾಣ ಮಾಡಲಾಗುತ್ತಿದೆ.
ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮಾತನಾಡಿ, ಅಂಬೇಡ್ಕರ್ ಅಶಯದಂತೆ ಎಲ್ಲರಿಗೂ ಸಮಾನತೆ ಹಾಗೂ ತಾರತಮ್ಯವಿಲ್ಲದೆ ಪ್ರತಿಯೊಬ್ಬರಿಗೂ ನ್ಯಾಯ ಸಿಗುವಂತಾಗಬೇಕು. ಯಾವ ಜಾತಿಯಲ್ಲಿ ಹುಟ್ಟಿದ್ದೇವೆ ಹಾಗೂ ಯಾವ ಸಮುದಾಯದವರು ಎಂಬುದು ಮುಖ್ಯವಲ್ಲ. ನನ್ನ ಕ್ಷೇತ್ರದ ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ ಪ್ರತಿ ಕುಟುಂಬಕ್ಕೆ ಮನೆ ನೀಡುವ ಕೆಲಸವನ್ನು ಮಾಡಲಿದ್ದೇನೆ. ಪ್ರಾಥಮಿಕ ಹಂತದಲ್ಲಿ 60 ಮನೆಗಳ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಲಾಗುವುದು. 2ನೇ ಹಂತದಲ್ಲಿ 44 ಮನೆಗಳ ಬಹುಮಹಡಿ ಕಟ್ಟಡದ ನಿರ್ಮಾಣ ಕಾರ್ಯವಾಗುತ್ತಿದೆ ಎಂದರು.
ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ, ಸಚಿವ ಮುನಿರತ್ನ, ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಮತ್ತಿತರರಿದ್ದರು.
ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

ನಾನು ಶಾಸಕ, ಸಚಿವ, ಡಿಸಿಎಂ ಆಗಿದ್ದೀನಿ… ಆದ್ರೆ ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್

ಜ್ಯೋತಿಷಿ ಮಾತು ನಂಬಿ ಸಾವಿನ ಮನೆ ಬಿಟ್ಟು ಲಾಡ್ಜ್​ಗೆ ಹೋದ ಮಾಲೀಕನಿಗೂ-ಕುಟುಂಬಕ್ಕೂ ಕಾದಿತ್ತು ಭಾರಿ ಆಘಾತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
