
ಚಿಕ್ಕಮಗಳೂರು:ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ವಾಪಸ್ ಪಡೆಯುವುದಾಗಿ ಆರ್‌ಬಿಐ ಘೋಷಿಸಿದೆ. ಇದರ ಬೆನ್ನಲ್ಲೆ, ಹರಕೆ ಹೊತ್ತ  ಭಕ್ತನೊಬ್ಬ ಜೆರಾಕ್ಸ್ ನೋಟನ್ನು ಕಳಸೇಶ್ವರ ದೇವರ ಕಾಣಿಕೆ ಹುಂಡಿಗೆ ಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ:ಸಹೋದರನಿಗೆ ದುಬಾರಿ ಬೆಲೆಯ ಕಾರು ಗಿಫ್ಟ್ ನೀಡಿದ ನಟಿ
ದಕ್ಷಿಣ ಕಾಶಿ ಕಳಸೇಶ್ವರ ದೇವಾಲಯದ ಆವರಣದಲ್ಲಿರುವ ಕಾಣಿಕೆ ಡಬ್ಬದಲ್ಲಿ  2000 ರೂ. ಮುಖ ಬೆಲೆಯ ಜೆರಾಕ್ಸ್ ನೋಟು ಪತ್ತೆಯಾಗಿದೆ.ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಳಸೇಶ್ವರ ದೇವಾಲಯದಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಆಶ್ಚರ್ಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಏರ್ ಇಂಡಿಯಾ ವಿಮಾನದಲ್ಲಿ ಈರುಳ್ಳಿ ವಾಸನೆ: ತುರ್ತು ಭೂಸ್ಪರ್ಶ ಮಾಡಿದ ಪ್ಲೈಟ್
ಹುಂಡಿಯ ಹಣ ಎಣಿಕೆ ಕಾರ್ಯದ ವೇಳೆ ನಕಲಿ ನೋಟು ಪತ್ತೆ ಬಳಿಕ ಜೆರಾಕ್ಸ್ ನೋಟನ್ನು ಆಡಳಿತ ಮಂಡಳಿ ಸದಸ್ಯರು ಹರಿದು ಹಾಕಿದ್ದಾರೆ. ಕಲರ್ ಜೆರಾಕ್ಸ್ ನೋಡಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಿಗೆ ಶಾಕ್ ಆಗಿದ್ದಾರೆ.
ಕಾಣಿಕೆ ಹುಂಡಿಲ್ಲಿ ಈ ಹಿಂದೆ ಪತ್ರಗಳು, ನಕಲಿ ನೋಟುಗಳು ಪತ್ತೆಯಾಗಿರುವ ಹಲವಾರು ಪ್ರಕರಣಗಳು ನಮ್ಮ ಮುಂದಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
