ಗದಗ:‘ಯಾವನೋ ಪಾಪ ಈಶ್ವರಪ್ಪ ಅಂತೆ.. ಅವನೊಬ್ಬ ತಲೆಕೆಟ್ಟ ಈಶ್ವರಪ್ಪ.. ನಮ್ಮ ಸರ್ಕಾರ ಇದ್ದಿದ್ದರೆ ಹತ್ತು ನಿಮಿಷದಲ್ಲಿ ಆತನ ರಾಜೀನಾಮೆ ಪಡೆಯುತಿದ್ವಿ. ಸಿಎಂ ಬೊಮ್ಮಾಯಿ ಮತ್ತು ಗವರ್ನರ್​ ಇಬ್ಬರೂ ಆತನನ್ನು ಮಂತ್ರಿಮಂಡಲದಲ್ಲಿ ಇನ್ನೂ ಮಡಿಕೊಂಡು ಕೂತವ್ರೇ.. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ನಗರದ ಕಾಟನ್​ ಸೇಲ್​ ಸೊಸೈಟಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್​ ಡಿಜಿಟಲ್​ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಭಾಷಣದುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ತಲೆಕೆಟ್ಟ ಈಶ್ವರಪ್ಪ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಕಾಲ ಬರುತ್ತದೆ ಎಂದು ಹೇಳಿದ್ದರೂ ಈ ಕುರಿತು ಒಂದು ಮಾತೂ ಆಡದೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಾಯಿಗೆ ಹೊಲಿಗೆ ಹಾಕಿಕೊಂಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ನಮ್ಮ ಸರ್ಕಾರವಿದ್ದಾಗ ಯಾರಾದರೂ ಹೀಗೆ ಮಾತನಾಡಿದ್ದರೆ ಹತ್ತು ನಿಮಿಷದಲ್ಲಿ ರಾಜೀನಾಮೆ ಪಡೆಯುತ್ತಿದ್ದೆವು. ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತುತ್ತೇವೆ ಎಂದ ಡಿಕೆಶಿ, ಸಚಿವ ಈಶ್ವರಪ್ಪ ವಿರುದ್ಧ ರಾಷ್ಟ್ರ ದ್ರೋಹಿ ಪ್ರಕರಣ ದಾಖಲಿಸುತ್ತೇವೆ. ಈಶ್ವರಪ್ಪ ಹೇಳಿಕೆ ಅತ್ಯಂತ ಖಂಡನೀಯ. ತ್ರಿವರ್ಣ ಧ್ವಜ ಕಾಂಗ್ರೆಸ್​ ಪಕ್ಷದ ಧ್ವಜವಾಗಿತ್ತು. ಅಶೋಕ ಚಕ್ರ ಸೇರಿ ದೇಶದ ಧ್ವಜವಾಗಿದೆ. ಹೀಗಾಗಿ ರಾಷ್ಟ್ರ ಧ್ವಜವೇ ನಮ್ಮ ಧರ್ಮ ಎಂದರು.
ಮುಂಬರುವ ಜಿಪಂ, ತಾಪಂ, ವಿಧಾನಸಭೆ ಚುನಾವಣೆಯನ್ನಿಟ್ಟುಕೊಂಡು ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಂಡಿಲ್ಲ. ಬಿಜೆಪಿಯವರು ನುಡಿದಂತೆ ನಡೆಯುತ್ತಿಲ್ಲ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಆರಂಭಿಸಿದ ಪಾದಯಾತ್ರೆ ತಡೆಗೆ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸಿತು. ಕರೊನಾ ಸೋಂಕು ವ್ಯಾಪಿಸಲಿದೆ ಎಂದು ಬೊಬ್ಬೆ ಹಾಕಿದರು. ಈ ಕುರಿತು ನ್ಯಾಯಾಲಯದ ಮೆಟ್ಟಿಲೇರಿದರು. ಆದರೆ, ಕಾಂಗ್ರೆಸ್​ ಇದ್ಯಾವುದಕ್ಕೂ ಬಗ್ಗಲ್ಲ. ಶಾಸಕಾಂಗ ಪಕ್ಷದ ಸಭೆ ಕರೆದು ಚರ್ಚಿಸಿ ಅಂತಿಮ ನಿರ್ಣಯದೊಂದಿಗೆ ಮತ್ತೆ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಹೋರಾಟ ಮಾಡಲಾಗುತ್ತದೆ ಎಂದರು.
ಚಿಕ್ಕಮಗಳೂರಿನ ಆಟವನ್ನು ಇಲ್ಲಿ ಆಡೋಕೆ ಬಂದ್ರೆ ನಾನು ಬಿಡಲ್ಲ: ರಾಮನಗರ ಎಸ್​ಪಿ ವಿರುದ್ಧ ಎಚ್​ಡಿಕೆ ಗರಂ

ಪಂಚಾಯಿತಿ ಚುನಾವಣೆ: ಮತದಾನಕ್ಕೂ ಮುನ್ನ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
