ಬೆಂಗಳೂರು:ಚಾರ್ಜ್​ಶೀಟ್ ಸಲ್ಲಿಕೆಗೆ ನಾವು ಹೆದರುವ ಅಗತ್ಯವಿಲ್ಲ. ಚಾರ್ಜ್​ಶೀಟ್ ಸಲ್ಲಿಕೆ ಒಂದು ಕಾನೂನು ಪ್ರಕ್ರಿಯೆ. ಅದರಲ್ಲಿ ಏನಿದೆ ಅಂತ ನಮಗೂ ಗೊತ್ತಿಲ್ಲ, ನಿಮಗೂ ಗೊತ್ತಿಲ್ಲ. ನಮ್ಮ ವಕೀಲರ ಜೊತೆ ಚರ್ಚಿಸುತ್ತೇವೆ. ರಾಜಕೀಯ ಪ್ರೇರಿತವಾಗಿ ನಮ್ಮ ವಿರುದ್ಧ ನಡೆಯುತ್ತಲೇ ಇರುತ್ತೆ, ಅದರ ವಿರುದ್ಧ ನಮ್ಮ ಹೋರಾಟ ನಡೆಯುತ್ತಲೇ ಇರುತ್ತೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.
ನಿರಂತರ ಆದಾಯ ಹೆಚ್ಚಳ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಇಡಿ ಅಧಿಕಾರಿಗಳು ಗುರುವಾರ ದೆಹಲಿ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ ಸಹೋದರ ಸುರೇಶ್​, ನಾವು ಹೆದರುವ ಪ್ರಶ್ನೆಯೇ ಇಲ್ಲ. ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರಲ್ಲ. ನಾವು ಎಲ್ಲದಕ್ಕೂ ಸಿದ್ಧ. ಪ್ರಕರಣ ಎದುರಿಸಲು ಮಾನಸಿಕವಾಗಿ, ದೈಹಿಕವಾಗಿ ಎಲ್ಲ ರೀತಿಯಲ್ಲಿ ಸಿದ್ಧರಾಗಿದ್ದೇವೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಸ್ವಾಯತ್ತ ಸಂಸ್ಥೆಗಳು ಕೈಕಟ್ಟಿ ಕುಳಿತಿವೆ. ಐಟಿ, ಸಿಬಿಐ, ಇಡಿ ಸ್ವಂತ ಇಚ್ಛಾಶಕ್ತಿಯಿಂದ ಕೆಲಸ ಮಾಡ್ತಿಲ್ಲ. ನ್ಯಾಯಾಲಯಗಳ ಮೇಲೂ ಒತ್ತಡ ಇದೆ. ವಿರೋಧ ಪಕ್ಷವಾಗಿ ನಾವು ಇವರಿಂದ ನ್ಯಾಯ ನಿರೀಕ್ಷೆ ಮಾಡಲು ಸಾಧ್ಯವಾಗುತ್ತಾ? ಎಂದು ಪ್ರಶ್ನಿಸಿದರು.
ಚಾರ್ಜ್​ಶೀಟ್​ನಲ್ಲಿ ಏನಿದೆ ಅಂತ ಗೊತ್ತಿಲ್ಲ. ಏನೇ ಇದ್ದರೂ ಕಾನೂನು ಹೋರಾಟ ಮಾಡ್ತೇವೆ. ಬಿಜೆಪಿಯ ಏನೇ ತಂತ್ರ, ಒಳಸಂಚು ಇದ್ದರೂ ಅದರ ವಿರುದ್ಧವೂ ಸಂಪೂರ್ಣ ಹೋರಾಟ ಮಾಡ್ತೇವೆ. ಏನೋ ಆಗಿಬಿಡುತ್ತೆ ಅಂತಾ ನಾವು ಹೆದರಿಕೊಂಡಿಲ್ಲ. ವಿಚಾರಣೆ 4 ವರ್ಷದಿಂದ ನಡೆಯುತ್ತಿದೆ. ಇನ್ನೂ ನಡೆಯಲಿ ಎಂದರು.
ಡಿಕೆಶಿಗೆ ಮತ್ತೆ ಎದುರಾಯ್ತು ಸಂಕಷ್ಟ! ಚಾರ್ಜ್​ಶೀಟ್​ ಸಲ್ಲಿಸಿದ ಇಡಿ

ಊಟ ಇಲ್ಲ ಎಂದಿದ್ದಕ್ಕೆ ಸಿಬ್ಬಂದಿಯನ್ನು ಕೂಡಿಹಾಕಿ ಡಾಬಾಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು! ಕೊಪ್ಪಳದಲ್ಲಿ ಅಮಾನವೀಯ ಕೃತ್ಯ

ಟೊಮ್ಯಾಟೊ ದರ ಏರಿಕೆ: ಕೆಜಿಗೆ 150 ರೂಪಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
