ಬೆಂಗಳೂರು:ಕರೊನಾ ಲಸಿಕೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಹೋಗಿ ವೈದ್ಯೆಯೊಬ್ಬರು ರೆಡ್ ಹ್ಯಾಂಡೆಡ್​ ಆಗಿ ಸಿಕ್ಕಿಬಿದ್ದಿದ್ದು, ಆಕೆಯನ್ನೂ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಈ ವೈದ್ಯೆ ಬಳಿ ವ್ಯಾಕ್ಸಿನ್​ ಹಾಕಿಸಿಕೊಂಡವರಿಗೆ ಶಾಕಿಂಗ್​ ನ್ಯೂಸ್​ ಬಂದಿದೆ. ವ್ಯಾಕ್ಸಿನ್ ಹಾಕಿಸಿಕೊಂಡು ಸೇಫಾದ್ವಿ ಅಂದುಕೊಂಡವರಿಗೆ ಡಿಸಿಪಿ ಹೇಳಿಕೆ ಟೆನ್ಷನ್​ ತರಿಸಿದೆ.
ಬೆಂಗಳೂರಿನ ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಪುಷ್ಪಿತಾ(25) ಮತ್ತು ಈಕೆಯ ಸಹಾಯಕಿ ಪ್ರೇಮಾ (34) ಇಬ್ಬರೂ ವ್ಯಾಕ್ಸಿನ್​ ದಂಧೆಯಲ್ಲಿ ತೊಡಗಿದ್ದರು. ಪಿಎಚ್​ಸಿಗೆ ಬರುತ್ತಿದ್ದ ಲಸಿಕೆಯನ್ನು ಕದ್ದು ಪ್ರೇಮಾಳ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸುತ್ತಿದ್ದ ಪುಷ್ಪಿತಾ, ಬಳಿಕ ಅದನ್ನು ತಲಾ 500 ರೂಪಾಯಿ ಪಡೆದು ಜನರಿಗೆ ಹಾಕುತ್ತಿದ್ದರು. ಕರೊನಾ ಲಸಿಕೆ ಅಕ್ರಮವಾಗಿ ಮಾರಾಡ ಮಾಡುತ್ತಿರುವಾಗಲೇ ಅನ್ನಪೂರ್ಣೇಶ್ವರಿನಗರ ಪೊಲೀಸರ ಕೈಗೆ ಇಬ್ಬರೂ ಸಿಕ್ಕಿಬಿದ್ದಿದ್ದರು.
ವೈದ್ಯೆ ಪುಷ್ಪಿತಾ ಅಕ್ರಮವಾಗಿ 53 ಜನಕ್ಕೆ ವ್ಯಾಕ್ಸಿನ್ ನೀಡಿರುವುದು ಅಧಿಕೃತವಾಗಿ ಬೆಳಕಿಗೆ ಬಂದಿದೆ. ತಲಾ 500 ರೂಪಾಯಿ ಪಡೆದು ವ್ಯಾಕ್ಸಿನ್ ನೀಡಲಾಗಿದೆ. ಹಣ ಕೊಟ್ಟು ವ್ಯಾಕ್ಸಿನ್​ ಹಾಕಿಸಿಕೊಂಡಿದ್ದರೂ ನೋ ಯೂಸ್. ವೈಯಲ್​ನಿಂದ ಇಂಜಕ್ಷನ್ ಡ್ರಾ ಮಾಡಿ ಗಂಟೆಗಳು ಕಳೆದ ಬಳಿಕ ವ್ಯಾಕ್ಸಿನ್ ನೀಡಿದ್ದು, ಈ ರೀತಿ ವ್ಯಾಕ್ಸಿನೇಷನ್ ಮಾಡಿದ್ರೆ ಪ್ರಯೋಜನವಿಲ್ಲ. ಇಂತಹ ವ್ಯಾಕ್ಸಿನ್​ ಹಾಕಿಸಿಕೊಂಡವರಿಗೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಡಿಸಿಪಿ ಡಾ.ಸಂಜೀವ್ ಪಾಟೀಲ್ ಹೇಳಿದ್ದಾರೆ.
ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

500 ರೂಪಾಯಿಗೆ ಲಸಿಕೆ ಮಾರಿ ಸಿಕ್ಕಿಬಿದ್ದ ವೈದ್ಯೆ; ಕೋವಿಡ್​ ವ್ಯಾಕ್ಸಿನ್ ಅಕ್ರಮವಾಗಿ ಮಾರುತ್ತಿದ್ದ ಇಬ್ಬರ ಬಂಧನ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seven =
Remember me
