ಶಿಡ್ಲಘಟ್ಟ:ಗೃಹಿಣಿಯೊಬ್ಬರು ವರದಕ್ಷಿಣೆ ಕಿರುಕುಳ ಸಹಿಸಲಾಗದೆ ತನ್ನ 6 ವರ್ಷದ ಮಗು ಜತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹರಳಹಳ್ಳಿಯಲ್ಲಿ ನಡೆದಿದೆ.
ಸೊಣ್ಣೇಗೌಡ ಎಂಬುವರ ಪತ್ನಿ ನವಲತಾ (25) ಮತ್ತು ಪುತ್ರ ಅಂಜನ್​ ಗೌಡ (6) ಮೃತರು. ಬುಧವಾರ ಸಂಜೆ ತೋಟದ ಮನೆಯತ್ತ ಹೋದವರು ವಾಪಸ್​ ಬಂದಿರಲಿಲ್ಲ. ಕುಟುಂಬಸ್ಥರು ಹುಡುಕಾಡಿದರೂ ಸುಳಿವು ಸಿಕ್ಕಿರಲಿಲ್ಲ.
ತೋಟದ ಬಳಿಯ ನೀರಿನ ಸಂಪಿನಲ್ಲಿ ಗುರುವಾರ ತಾಯಿ-ಮಗನ ಶವಗಳು ಪತ್ತೆಯಾಗಿವೆ. ಮಗಳು ಮತ್ತು ಮೊಮ್ಮಗನ ಸಾವಿನ ಸುದ್ದಿ ಬರುತ್ತಿದ್ದಂತೆ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ನನ್ನ ಮಗಳು ಮತ್ತು ಮೊಮ್ಮಗನ ಸಾವಿಗೆ ಅಳಿಯ ಸೊಣ್ಣೇಗೌಡ ಹಾಗೂ ಆತನ ಪಾಲಕರೇ ಕಾರಣ. ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಅವರಿಬ್ಬರೂ ಸತ್ತಿದ್ದಾರೆ ಎಂದು ಮೃತಳ ಪಾಲಕರು ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಒಂದೇ ದಿನ ವಿದ್ಯಾರ್ಥಿ-ಶಿಕ್ಷಕಿ ನಾಪತ್ತೆ! ಮದ್ವೆ ಆಗಿ ಬಾಲಕನ ಜತೆ ಸಂಸಾರ ನಡೆಸುತ್ತಿದ್ದಾಕೆ ಸಿಕ್ಕಿಬಿದ್ದದ್ದೇ ರೋಚಕ

ಕುಡಿದು ಸಿಟ್ಟಿನಿಂದ ಸಿಎಂಗೆ ಬೈದಿದ್ದೀನಿ… ದಯವಿಟ್ಟು ಕ್ಷಮಿಸಿ: ಶಾಬಾಜ್​ ಉಲ್ಲಾಖಾನ್​

ಮೂರು ಮದ್ವೆ ಆದ್ರೂ ಮುಗಿಯದ ಚೆಲ್ಲಾಟ! 3ನೇ ಗಂಡನಿಗೆ ಪ್ರಾಣಸಂಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 10 =
Remember me
