ಬೆಂಗಳೂರು:ಇಲ್ಲೊಬ್ಬ ಭೂಪ ವರದಕ್ಷಿಣೆಗಾಗಿ ತನ್ನ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ತನ್ನ ಸಹೋದರರಿಬ್ಬರಿಗೆ ಕುಮ್ಮಕ್ಕು ನೀಡಿ ವಿಕೃತಿ ಮೆರೆದಿದ್ದಾನೆ… ನೊಂದ ಮಹಿಳೆ ಗೋವಿಂದಪುರ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದು, ತನ್ನ ಮೇಲಾದ ದೌರ್ಜನ್ಯ, ಅನುಭವಿಸಿದ ಚಿತ್ರಹಿಂಸೆಯ ಬಗ್ಗೆ ದೂರಿನಲ್ಲಿ ವಿವರಿಸಿದ್ದಾರೆ.
ದೇವರಜೀವನಹಳ್ಳಿಯ 30 ವರ್ಷದ ಸಂತ್ರಸ್ತೆ ಕೊಟ್ಟ ದೂರಿನ ಆಧಾರದ ಮೇಲೆ ಗೋವಿಂದಪುರ ಪೊಲೀಸರು ಆಕೆಯ ಪತಿ ಅಬ್ದುಲ್​ ನಬಿ ಹಾಗೂ ಇತರ 6 ಮಂದಿ ವಿರುದ್ಧ ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತೆಯು 2007ರಲ್ಲಿ ಅಬ್ದುಲ್​ ನಬಿ ಎಂಬಾತನ್ನು ವಿವಾಹವಾಗಿದ್ದು, ದಂಪತಿಗೆ ಮೂವರು ಮಕ್ಕಳಿದ್ದಾರೆ. ದಂಪತಿ ಆರಂಭದಲ್ಲಿ ಅನ್ಯೋನ್ಯವಾಗಿದ್ದರು. 2019ರಲ್ಲಿ ಸಂತ್ರಸ್ತೆಯ ತಂದೆ ಮೃತಪಟ್ಟಿದ್ದರು. ಇದಾದ ಬಳಿಕ ತವರು ಮನೆಯಿಂದ ವರದಕ್ಷಿಣೆ ತರುವಂತೆ ಸಂತ್ರಸ್ತೆಗೆ ಪತಿ ಕಿರುಕುಳ ಕೊಡಲು ಆರಂಭಿಸಿದ್ದ. ಮನೆಗೆ ಬರಬೇಕೆಂದರೆ 5 ಲಕ್ಷ ರೂ. ತರುವಂತೆ ಬೆದರಿಸಿದ್ದ.
ಹೀಗಾಗಿ ಸಂತ್ರಸ್ತೆ 2 ವರ್ಷಗಳಿಂದ ತವರು ಮನೆಯಲ್ಲೇ ವಾಸಿಸುತ್ತಿದ್ದಾಳೆ. 2 ತಿಂಗಳ ಹಿಂದೆ ಪತ್ನಿಯ ಗಮನಕ್ಕೆ ಬಾರದಂತೆ ಪತಿ ಅಬ್ದುಲ್​ ನಬಿ ಬೇರೆ ವಿವಾಹವಾಗಿದ್ದ. ಈ ವಿಚಾರ ಪತ್ನಿಗೆ ತಿಳಿದು, ಫೆ.3ರಂದು ರಾತ್ರಿ ಪತಿಯ ಮನೆಗೆ ಹೋಗಿ ಈ ವಿಚಾರದ ಬಗ್ಗೆ ಪ್ರಶ್ನಿಸಿದ್ದಳು. ಆ ವೇಳೆ ಪತ್ನಿಯನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಪತಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವಂತೆ ಪತ್ನಿಯ ಸಹೋದರರಿಗೆ ಸೂಚಿಸಿದ್ದ. ಇಬ್ಬರು ಮೈದುನರು ಸಂತ್ರಸ್ತೆಗೆ ಹಲ್ಲೆ ನಡೆಸಿದ್ದರು. ಅಬ್ದುಲ್​ ನಬಿ ಅಕ್ಕ, ಸಂತ್ರಸ್ತೆಯ ಬಟ್ಟೆ ಹರಿದು ಹಾಕಿ ಮಾನಕ್ಕೆ ಕುಂದುಂಡು ಮಾಡಿದ್ದಳು. ನೊಂದ ಸಂತ್ರಸ್ತೆ ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಗೋವಿಂದಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪ್ರಾಪ್ತ ನಾದಿನಿಯನ್ನ ಲೈಂಗಿಕವಾಗಿ ಬಳಸಿ ವಿಕೃತಿ ಮೆರೆದ ಬಾವ! ಪ್ರಸವಪೂರ್ವ ಹೆರಿಗೆಯಾದ ಮಗು ಸಾವು

ಡೇಟಿಂಗ್​ ನೆಪದಲ್ಲಿ ಅವಿವಾಹಿತೆಯರ ಮನೆಗೆ ತೆರಳುತ್ತಿದ್ದ ಎರಡು ಮಕ್ಕಳ ತಂದೆ, ಬಟ್ಟೆ ಬಿಚ್ಚುತ್ತಿದ್ದಂತೆ ವರಸೆ ಬದಲಿಸುತ್ತಿದ್ದ…

ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 17 =
Remember me
