ಮಂಡ್ಯ:ಕರೊನಾ ವ್ಯಾಕ್ಸಿನ್ ತೆಗೆದುಕೊಂಡಿದ್ದೇನೆ ಎಂದು ನಿರ್ಲಕ್ಷ್ಯ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ‌.ನಿರ್ಮಲಾನಂದನಾಥ ಸ್ವಾಮೀಜಿ ಎಚ್ಚರಿಸಿದ್ದಾರೆ.
ಈಗ ಬಂದಿರುವ ಕರೋನಾದ ಎರಡನೇ ಅಲೆಗೆ ಎರಡು ತಲೆ ಇದೆ. ಸದ್ಯದ ಅಭಿಪ್ರಾಯ ವ್ಯಾಕ್ಸಿನ್ ಒಂದೇ ಪರಿಹಾರ. ವ್ಯಾಕ್ಸಿನ್ ತೆಗೆದುಕೊಂಡರೆ ಕರೊನಾದಿಂದ ಮುಕ್ತವಾಗಬಹುದು ಎನ್ನುವುದು ಎಲ್ಲರ ಅಭಿಪ್ರಾಯ. ವ್ಯಾಕ್ಸಿನ್ ತೆಗೆದುಕೊಂಡಿದ್ದೇನೆ ಎಂದು ಬೇಜವಾಬ್ದಾರಿಯಿಂದ ಓಡಾಡಿದ್ರೆ ಅಪಾಯ ತಪ್ಪಿದ್ದಲ್ಲ. ಕರೊನಾ ವೈರಸ್ ಆರು ತಿಂಗಳು, ವರ್ಷಕ್ಕೆ ತನ್ನ ರೂಪ ಬದಲಿಸಿಕೊಳ್ಳುತ್ತಿದೆ. ತನ್ನ ಒಳಗಿರುವ ಶಕ್ತಿಯನ್ನೂ ವೈರಸ್ ಹೆಚ್ಚಿಸಿಕೊಳ್ಳುತ್ತಿದೆ. ಸದ್ಯ ಯಾವುದೇ ಔಷಧ ಪೂರ್ಣ ಗುಣವನ್ನು ತಂದುಕೊಡುವುದಿಲ್ಲ. ಜನರು ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದರು.
ಪ್ರತಿಯೊಬ್ಬರೂ SMS ಸೂತ್ರವನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳುವುದು, ನಮ್ಮನ್ನ ಶುದ್ಧವಾಗಿ ಇಟ್ಟುಕೊಳ್ಳುವುದು. ಇದನ್ನು ಸದಾಕಾಲ ಅನುಸರಿಸಿದರೆ ಎಲ್ಲ ಕಾಯಿಲೆಗೂ ಪರಿಹಾರ. ಸದ್ಯ ಬದುಕು ಜರ್ಜರಿತವಾಗಿದೆ. ಎಷ್ಟೋ ಜನ ಕೆಲಸ ಇಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಮನೆಗಳಲ್ಲಿ ಬಡತನ ಕಾಡುತ್ತಿದೆ. ಹಲವಾರು ರೀತಿಯಲ್ಲಿ ಕರೊನಾ ಬದುಕನ್ನು ಕಿತ್ತುಕೊಂಡಿದೆ. ಈ ವೈರಸ್ ಹರಡದಂತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು ಎಂದು ಡಾ‌.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ವಿದೇಶದಿಂದ ಬೀದರ್​ಗೆ ಬಂದ ಮಗನೂ ದುರಂತ ಅಂತ್ಯ!
ಕೋವಿಡ್ ಆಸ್ಪತ್ರೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು! ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕೋದು ಗ್ಯಾರಂಟಿ
ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ
ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ
ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 1 =
Remember me
