ಬೆಳಗಾವಿ:ಕೆಎಲ್​ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಅವರು ನಮ್ಮ ಹಿರಿಯರು, ಮಾರ್ಗದರ್ಶಕರು. ಪಕ್ಷವು ಅವರನ್ನ ಗುರುತಿಸುತ್ತದೆ, ನಾವೂ ಗುರುತಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಶನಿವಾರ ಡಾ.ಪ್ರಭಾಕರ ಕೋರೆ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವಿಧಾನಪರಿಷತ್ ಚುನಾವಣೆಯ 4 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಪ್ರಯತ್ನಿಸಲಾಗಿದೆ. ಡಾ.ಕೋರೆ ನಮ್ಮ ಹಿರಿಯ ಮಾರ್ಗದರ್ಶಕರು. ಸದಾ ಕಾಲ ನಮ್ಮ ಮಾರ್ಗದರ್ಶಕರಾಗಿ ಇರುತ್ತಾರೆ. ಅವರಿಗೆ ಅವರದ್ದೇ ಆದ ಸ್ಥಾನವಿದೆ. 4 ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಅವರು ಮಾಡಿದ ಕೆಲಸಕ್ಕೆ ಮಹತ್ವವಿದೆ. ವಿಧಾನ ಪರಿಷತ್​ ಚುನಾವಣೆಯಲ್ಲಿ ಹಲವು ರೀತಿಯ ಮಾರ್ಗದರ್ಶನ ನೀಡುತ್ತಿದ್ದಾರೆ. ಹೀಗಾಗಿ ಅವರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಮೆರಿಕದಲ್ಲಿ ಡಾಕ್ಟರೇಟ್​ ಪದವಿ ಪ್ರದಾನ ಕಾರ್ಯಕ್ರಮ ಇರುವ ಕುರಿತು ಡಾ.ಪ್ರಭಾಕರ ಕೋರೆ ಅವರು 4 ತಿಂಗಳ ಮುಂಚಿತವಾಗಿ ನನ್ನ ಗಮನಕ್ಕೆ ತಂದು ಹೋಗಿದ್ದರು. ಹಾಗಾಗಿ, ಅವರು ಚುನಾವಣೆ ಚಟುವಟಿಕೆಗಳಲ್ಲಿ ಭಾಗವಹಿಸಿರಲಿಲ್ಲ. ಇದೀಗ ಅವರು ಆಗಮಿಸಿದ್ದಾರೆ. ಅವರ ರಾಜಕೀಯ ಅನುಭವವನ್ನು ಪಕ್ಷವು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದೆ ಎಂದರು.ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳನ್ನು ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತ ಕ್ಷೇತ್ರ, ಧಾರವಾಡ, ಗದಗ, ಹಾವೇರಿ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರ ಹಾಗೂ ಮೈಸೂರು ಪದವೀಧರ ಮತ ಕ್ಷೇತ್ರದಿಂದ ವಿಧಾನ ಪರಿಷತ್​ ಚುನಾವಣೆ ಕಾವೇರಿದೆ.
ಕುಮಾರಸ್ವಾಮಿಗೆ ತಾಕತ್ತಿದ್ದರೆ ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಲಿ: ಚಾಲೆಂಜ್​ ಮಾಡುತ್ತಲೇ ನಾಲಗೆ ಹರಿಬಿಟ್ಟ ಗುಬ್ಬಿ ವಾಸು

ಹೈಕೋರ್ಟ್​ನಲ್ಲಿ ಬಯಲಾಯ್ತು ತಾಯಿ-ಮಗಳ ಕಳ್ಳಾಟ! ಮ್ಯಾಟ್ರಿಮೋನಿಯಲ್​ ಮೂಲಕ ಪರಿಚಯ, ಮದ್ವೆ… ಬಳಿಕ ನಡೆದದ್ದೇ ಬೇರೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × four =
Remember me
