ಕೋಲಾರ:ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಎಲ್ಲ ಸಮುದಾಯಗಳಿಗೆ ಪೇಟೆಗಳನ್ನು ಸ್ಥಾಪಿಸಿ ವ್ಯಾಪಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದರು. ಅವರೆಲ್ಲೂ ಒಕ್ಕಲಿಗರಪೇಟೆ ಸ್ಥಾಪಿಸಲಿಲ್ಲ. ಸರ್ವರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಒಕ್ಕಲಿಗರ ಬುಡವೇ ಭದ್ರವಾಗಿರದಿದ್ದರೆ ಇತರರನ್ನು ಕರೆದೊಯ್ಯುವುದಾದರೂ ಹೇಗೆ? ಸರ್ಕಾರ ಇದನ್ನು ಅರ್ಥೈಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಶ್ರೀಗಳು, ಬೆಂಗಳೂರು ಸುತ್ತ ಶೇ.60 ಒಕ್ಕಲಿಗ ಸಮುದಾಯವಿದ್ದು, ಬಹುತೇಕ ಮಂದಿ ಜಮೀನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಪ್ರಸ್ತುತ 1.5 ಕೋಟಿ ಜನಸಂಖ್ಯೆಯಿದ್ದು, 2050ಕ್ಕೆ 4.5ಕೋಟಿಯಾಗಲಿದೆ ಎಂದು ಮುಖ್ಯಮಂತ್ರಿಯವರೇ ಇತ್ತೀಚೆಗೆ ತಿಳಿಸಿದ್ದಾರೆ. ಹಾಗಾದರೆ 30 ವರ್ಷಕ್ಕೆ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಎಲ್ಲ ರೈತರು ಜಮೀನುಗಳನ್ನು ಕಳೆದುಕೊಳ್ಳುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು. ಇಂತಹ ವಿಚಾರಗಳ ಬಗ್ಗೆ ಜನಪ್ರತಿನಿಧಿಗಳು ಹೋರಾಡಲು ಸಿದ್ಧರಿರಬೇಕು ಎಂದು ಸೂಚಿಸಿದರು.
ಮಠದ ಸಮೀಕ್ಷೆಯಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನ ಸ್ಲಂನಲ್ಲಿ ಹೆಚ್ಚಿನ ಒಕ್ಕಲಿಗರು ವಾಸಿಸುತ್ತಿರುವುದು ಕಂಡುಬಂದಿದೆ. ಬೆಂಗಳೂರು ಅಭಿವೃದ್ಧಿಯಿಂದ ಹೆಚ್ಚು ಒಕ್ಕಲಿಗರು ನಿರ್ಗತಿಕರಾಗುತ್ತಿದ್ದಾರೆ. ಈ ಬಗ್ಗೆ ಮಠ, ಸಂಘ ಸೇರಿ ಸಮಿತಿ ರಚಿಸಿ ಸರ್ವೇ ಮಾಡುತ್ತೇವೆ ಎಂದು ಸ್ವಾಮೀಜಿ ಹೇಳಿದರು.
ಮತ್ತೊಂದು ಐತಿಹಾಸಿಕ ಹೋರಾಟಕ್ಕೆ ಸಜ್ಜಾಗಿ… ಒಕ್ಕಲಿಗ ಸಮುದಾಯಕ್ಕೆ ಆದಿಚುಂಚನಗಿರಿ ಶ್ರೀಗಳು ಕರೆ

ಪಾವಗಡದ ಸೋಲಾರ್ ಪಾರ್ಕ್ ಮುಳುಗಡೆ: ಏಷ್ಯಾದ ಅತಿ ದೊಡ್ಡ ಸೌರ ಘಟಕದಲ್ಲಿ ಯುವಕನೊಬ್ಬ ಈಜಾಡುತ್ತಿರುವ ದೃಶ್ಯ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 − 1 =
Remember me
