ಬೆಂಗಳೂರು:ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಹಲವೆಡೆ ಭೂಮಿ ಕಂಪಿಸಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ರಿಕ್ಟರ್​ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮಗಳ ಸುತ್ತಮುತ್ತ, ಗುರುವಾರ ಬೆಳಗಿನಜಾವ 4.40ರ ಸುಮಾರಿನಲ್ಲಿ ಭೂಮಿ ನಡುಗಿದ ಅನುಭವವಾಗಿದೆ. ಗಾಬರಿಯಿಂದ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಲಘು ಭೂಕಂಪನ ಆಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧಿಕಾರಿಗಳು ದೃಢಪಡಿಸಿದ್ದಾರೆ. ಹಾಸನಕ್ಕೆ ಹೊಂದಿಕೊಂಡಂತಿರುವ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಪಂಚಾಯಿತಿ, ನೇಗಳ್ಳಿ ಸೇರಿದಂತೆ ಹಲವೆಡೆಯೂ ಭೂಮಿ ಕಂಪಿಸಿದೆ.
ಮಂಡ್ಯ ಜಿಲ್ಲೆಯ ಕೆಲ ಹಳ್ಳಿಗಳಲ್ಲಿ ಭಾರೀ ಶಬ್ದ ಕೇಳಿಸುವ ಜತೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಕೆ.ಆರ್.ಪೇಟೆ ತಾಲೂಕಿನ ಮಾದಾಪುರ, ಗೊಂದಿಹಳ್ಳಿ, ಚಿನ್ನೇನಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭೂಮಿ ಕಂಪಿಸಿದೆ.
ಸಹೋದ್ಯೋಗಿ ಪತ್ನಿಯ ಮೇಲೆ 8 ಕಾನ್​ಸ್ಟೇಬಲ್​ಗಳಿಂದ ನಿರಂತರ ಅತ್ಯಾಚಾರ: ಆರೋಪಿಗಳಿಗೆ ಹೈಕೋರ್ಟ್​ನಲ್ಲೂ ಹಿನ್ನಡೆ

ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 1 =
Remember me
