ಕೊಡಗು:ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮತ್ತೆ ಭೂಕಂಪನ ಸಂಭವಿಸಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ. ಶುಕ್ರವಾರ ರಾತ್ರಿ 1 ರಿಂದ 1.40ರ ಅವಧಿಯಲ್ಲಿ ಸಂಪಾಜೆ, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ. ಒಂದೇ ವಾರದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
ಶುಕ್ರವಾರ ತಡರಾತ್ರಿ ಭೂಕಂಪನದ ಅನುಭವವಾಗಿರುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ದೂರು ಬಂದಿದೆ. ಇದನ್ನು ಪರಿಶೀಲಿಸಿದಾಗ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ‌ ಕೇಂದ್ರ, ಬೆಂಗಳೂರು ಇವರ ಮಾಹಿತಿಯ ಪ್ರಕಾರ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಿಂದ 5.2 ಕಿ.ಮೀ. ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 10 ಕಿ.ಮೀ. ಆಳದಲ್ಲಿ ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 1.8 ಎಂದು ದಾಖಲಾಗಿದೆ ಎಂದು ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ತಿಳಿಸಿದ್ದಾರೆ.
ಈ ಭೂಕಂಪನದಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ ಹಲವು ಸೆಕೆಂಡ್ ಸಮಯ ಕಂಪನದ ಅನುಭವವಾಗಿದೆ. ಕೊಡಗು‌ ಜಿಲ್ಲೆ‌ Zone III ಗೆ ಬರುತ್ತದೆ. ಈ ಭೂಕಂಪನವನ್ನು ವೈಜ್ಞಾನಿಕವಾಗಿ ಪರಿಶೀಲಿಸಿದಾಗ ಸುಮಾರು 30 ಕಿ.ಮೀ. ಪ್ರದೇಶದವರೆಗೂ ಅನುಭವವಾಗುವ ಸಾಧ್ಯತೆ ಇದೆ. ಆದರೆ, ಈ ಕಂಪನದಿಂದ ಭಯ ಪಡುವ ಅಗತ್ಯವಿಲ್ಲ. ಹೆಚ್ಚೆಂದರೆ ಮನೆಯಲ್ಲಿರುವ‌ ವಸ್ತು ಅಲುಗಾಡಬಹುದು. ಜನತೆ ಗಾಬರಿ ಪಡುವ ಅವಶ್ಯಕತೆಯಿಲ್ಲ ಎಂದು ಆರ್.ಎಂ.ಅನನ್ಯ ವಾಸುದೇವ್ ತಿಳಿಸಿದ್ದಾರೆ. ಮತ್ತೆ ಭೂಕಂಪದ ಅನುಭವ ಆದರೆ ಹಾಗೂ ಭೂಮಿಯಲ್ಲಿ ಬಿರುಕು ಕಂಡು ಬಂದರೆ ಕೊಡಗು ಜಿಲ್ಲೆಯ ವಿಪತ್ತು ನಿರ್ವಹಣಾ ಕೇಂದ್ರ 08272- 221077, 221099ಕ್ಕೆ ಕರೆ ಮಾಡಿ ಮಾಹಿತಿ ಕೊಡಬೇಕಾಗಿ ತಿಳಿಸಿದ್ದಾರೆ.
ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

‘ವಿಧಾನಸಭೆ ಚುನಾವಣೆ ವೇಳೆ 12 ಸಚಿವರ CD ಹೊರಬರುತ್ತೆ… 30 ಕೋಟಿ ರೂಪಾಯಿಗೆ ಒಂದು ಮಂಚ ಕೊಟ್ಟಿದ್ರು’

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 19 =
Remember me
