ಬೆಂಗಳೂರು:ಚಾಮರಾಜಪೇಟೆ ಶಾಸಕ ಜಮೀರ್​ ಅಹಮದ್​ ಖಾನ್​ಗೆ ಕೋಟ್ಯಂತರ ರೂಪಾಯಿ ಸಾಲ ಕೊಟ್ಟಿದ್ದ ಗುಜರಿ ವ್ಯಾಪಾರಿ, ಕಾಂಗ್ರೆಸ್​ ಮುಖಂಡ ಯೂಸೂಫ್​ ಶರೀಫ್​ (ಕೆಜಿಎಫ್​ ಬಾಬು) ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಸಿಲುಕಿರುವ ಕೆಜಿಎಫ್​​ ಬಾಬುಗೆ ಆ.10ರೊಳಗೆ ಉತ್ತರ ನೀಡುವಂತೆ ಇಡಿ ಅಧಿಕಾರಿಗಳು ನೋಟಿಸ್​ ಜಾರಿ ಮಾಡಿದ್ದಾರೆ.
ಐಎಂಎ ಬಹುಕೋಟಿ ಅಕ್ರಮ ಪ್ರಕರಣದಲ್ಲಿ ಸಿಲುಕಿರುವ ಶಾಸಕ ಜಮೀರ್​​ರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ನಡೆಸಿದ್ದರು. ಕೆಜಿಎಫ್​ ಬಾಬು ಬಳಿ 3 ಕೋಟಿ ರೂ. ಸಾಲ ಪಡೆದಿರುವುದಾಗಿ ಜಮೀರ್​ ಹೇಳಿಕೆ ನೀಡಿದ್ದರು. ಇದರ ಆಧಾರದ ಮೇಲೆ ಕೆಜಿಎಫ್​​ ಬಾಬು ಮನೆ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು, ಬೆಲೆ ಬಾಳುವ ವಸ್ತುಗಳನ್ನು ಜಪ್ತಿ ಮಾಡಿ ಅಜ್ಯುಡಿಕ್ಟಿಂಗ್​ ಕಮಿಟಿಗೆ ಒಪ್ಪಿಸಿದ್ದಾರೆ. ಈ ವಸ್ತುಗಳನ್ನು ಕೆಜಿಎಫ್​ ಬಾಬುಗೆ ವಾಪಸ್​ ನೀಡದಂತೆ ಇಡಿ ಅಧಿಕಾರಿಗಳು ಆಕ್ಷೇಪ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಅಜ್ಯುಡಿಕ್ಟಿಂಗ್​ ಕಮಿಟಿ, ಆ.10ರ ಒಳಗಾಗಿ ಲಿಖಿತ ಉತ್ತರ ನೀಡಲು ಕೆಜಿಎಫ್​ ಬಾಬುಗೆ ಶೋಕಾಸ್​ ನೊಟೀಸ್​ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
40 ಕೋಟಿ ರೂ. ಆದಾಯ ತೆರಿಗೆ ಪಾವತಿ ಮಾಡುತ್ತಿದ್ದೇನೆ. ಆದರೂ ಇಡಿ ಅಧಿಕಾರಿಗಳು ಟಾರ್ಚರ್​ ಕೊಡುತ್ತಿದ್ದಾರೆ. ನನ್ನ ಪತ್ನಿಗೆ ಆಪರೇಷನ್​ ಆಗಿದೆ. ಆದರೂ ವಿಚಾರಣೆ ನಡೆಸಿದ್ದಾರೆ ಎಂದು ಕೆಜಿಎಫ್​​ ಬಾಬು ಬೇಸರ ವ್ಯಕ್ತಪಡಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿಗೆ ಕರೊನಾ ಪಾಸಿಟಿವ್​: ಕೊನೇ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದು

ಸ್ವಾತಂತ್ರ್ಯೋತ್ಸವ ಪ್ರಬಂಧ ಸ್ಪರ್ಧೆ: ಸಾವಿರಾರು ವಿದ್ಯಾರ್ಥಿಗಳು ಭಾಗಿ, ವಿಜಯವಾಣಿ- ದಿಗ್ವಿಜಯ ನ್ಯೂಸ್​ ಆಯೋಜನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
